ಬೆಂಗಳೂರು:ಸಿಎಂ ಆಗಿ ಚೊಚ್ಚಲ ಬಜೆಟ್​ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಕ್ಷೇತ್ರಕ್ಕೆ ನೀಡಿದ ಅನುದಾನದ ಸಮಗ್ರ ವಿವರ ಈ ಕೆಳಕಂಡಂತಿದೆ.
ಕೃಷಿ ಮತ್ತು ಪೂರಕ ಚಟುವಟಿಕೆಗಳುಕೃಷಿ ಉತ್ಪಾದನೆ ಹೆಚ್ಚಳಕ್ಕೆ ಅನುಗುಣವಾಗಿ ರೈತರ ಆದಾಯವೂ ಚ್ಚಳವಾಗಬೇಕು. ಪ್ರಧಾನಿ ನರೇಂದ್ರಮೋದಿಯವರ ಕನಸಿನಂತೆ, ತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ರೈತರ ದಾಯ ದ್ವಿಗುಣಗೊಳಿಸಲು ನಮ್ಮ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಕೃಷಿ ಕ್ಷೇತ್ರದ ಸುಧಾರಣೆಗಾಗಿ ಹಾಗೂ ಕೃಷಿಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ರೈತರ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್, ನೀರಾವರಿ ಸೌಲಭ್ಯ, ರಿಯಾಯಿತಿ ದರದಲ್ಲಿ ಬೀಜ, ಗೊಬ್ಬರ, ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ, ಪಿ.ಎಂ ಕಿಸಾನ್ ಸಹಾಂಯಧನ ಹೀಗೆ ಹಲವಾರು ಸೌಲಭ್ಯಗಳನ್ನು ವಿವಿಧ ಯೋಜನೆಗಳಡಿ ಒದಗಿಸಲಾಗುತ್ತಿದೆ. ಈ ಎಲ್ಲಾ ಕ್ರಮಗಳು ಆತ್ಮನಿರ್ಭರ ಭಾರತ ಕಟ್ಟುವ ಆಶಕ್ಕೆ ಶಯಕ್ಕೆ ಪೂರಕವಾಗಿದೆ.
20. ರಾಜ್ಯದಲ್ಲಿ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಕೃಷಿ ಯಾಂತ್ರೀಕರಣದ ಪಾತ್ರ ಬಹುಮುಖ್ಯವಾಗಿದೆ. ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ರಾಜ್ಯದಲ್ಲಿಯೇ ಮೊಟ್ಟಮೊದಲ ಬಾರಿಗೆ ಪ್ರತಿ ಎಕರೆಗೆ 250/- ರೂ.ಗಳಂತೆ ಗರಿಷ್ಠಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸಲ್‍ಗೆ ಸಹಾಯಧನವನ್ನು ನೀಡಲು “ರೈತ ಶಕ್ತಿ” ಎಂಬ ಹೊಸ ಯೋಜನೆಗೆ 500 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಕೇಂದ್ರ ಸರ್ಕಾರದ ಪಿ.ಎಂ. ಕಿಸಾನ್ ಯೋಜನೆಯಡಿಯಲ್ಲಿನ 50 ಲಕ್ಷ ಕ್ಕೂ ಹೆಚ್ಚಿನ ರೈತರಿಗೆ 2021-22ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 1,978 ಕೋಟಿ ರೂ.ಗಳ ಅನುದಾನವನ್ನು ನೇರ ನಗದು ವರ್ಗಾಯಿಸಲಾಗಿದೆ. ಈ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಮುಂದುವರೆಸಲಾಗುವುದು. ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೈಗೆಟುಕುವಂತೆ ಮಾಡಲು ಹಾಗೂ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಈಗಾಗಲೇ ಸ್ಥಾಪಿಸಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ರಾಜ್ಯದ ಎಲ್ಲಾ ಹೋಬಳಿಗಳಿಗೆ ವಿಸ್ತರಿಸಲಾಗುವುದು.
ರೈತರ ಆದಾಯವನ್ನು ಹೆಚ್ಚಿಸುವ ಧ್ಯೇಯದೊಂದಿಗೆ ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ “ಸೆಕೆಂಡರಿ ಕೃಷಿ ನಿರ್ದೇಶನಾಲಯ” ವನ್ನು ಸ್ಥಾಪಿಸಲಾಗಿದೆ. ರೈತ ಉತ್ಪಾದಕರ ಸಂಸ್ಥೆಗಳನ್ನು ಬಳಸಿ ಕೃಷಿಯ ಪ್ರಾಥಮಿಕ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ, ಈ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ಅವಕಾಶಗಳನ್ನು ಸೃಷ್ಟಿಸಲು ಇದು ಸಹಕಾರಿಯಾಗಲಿದೆ. ಕೆಪೆಕ್ (KAPPEC) ಮುಖಾಂತರ ರೈತ ಉತ್ಪಾದಕರ ಸಂಸ್ಥೆ ಗಳಿಗೆ ಸಾಮಾನ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಿ, ಕೊಯ್ಲಿನೋತ್ತರ ನಿರ್ವಹಣೆಯನ್ನು ಕೈಗೊಂಡು, ಅವುಗಳ ಉತ್ಪನ್ನಗಳನ್ನು ಮಾರಾಟ ಮತ್ತು ರಫ್ತು ಮಾಡಲು 50 ಕೋಟಿ ರೂ.ಗಳಲ್ಲಿ ಯೋಜನೆ ರೂಪಿಸಲಾಗುವುದು.
ಕೃಷಿ / ತೋಟಗಾರಿಕೆ ಉತ್ಪನ್ನಗಳು ಪೋಲಾಗುವುದನ್ನು ತಪ್ಪಿಸಿ, ಮೌಲ್ಯವರ್ಧನೆಯನ್ನು ಉತ್ತೇಜಿಸಲು ಮತ್ತು ಸರಬರಾಜು ಸರಪಳಿಯನ್ನು ಸದೃಢಗೊಳಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕುಗಳನ್ನು ಹಂತ ಹಂತವಾಗಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ಇದರೊಂದಿಗೆ ನೈಸರ್ಗಿಕ ಕೃಷಿ ಕೈಗೊಳ್ಳಲು ರೈತರನ್ನು ಪ್ರೇರೇಪಿಸುವ ಉದ್ದೇಶದಿಂದ ಎಲ್ಲಾ ಕೃಷಿ / ತೋಟಗಾರಿಕಾ ವಿಶ್ವವಿದ್ಯಾಲಯಗಳ ಮುಖಾಂತರ ತಲಾ 1,000 ಎಕೆರೆ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಸಾರಜನಕ ಸ್ಥಿರೀಕರಣ, ಜೈವಿಕ ವಿಶ್ಲೇಷಣೆ ಅಧ್ಯಯನಗಳನ್ನು ಕೈಗೊಂಡು ರೈತರ ಹೊಲಗಳಿಗೆ ವಿಸ್ತರಿಸಲಾಗುವುದು. ರಾಜ್ಯದಲ್ಲಿ ಒಟ್ಟಾರೆ 2 ಲಕ್ಷ ಹೆಕ್ಟೇರ್​ ಮಳೆಯಾಶ್ರೀತ ಪ್ರದೇಶವನ್ನು ಸಾವಯವ ಕೃಷಿಯಡಿ ತರಲಾಗಿದ್ದು ರಾಷ್ಟ್ರದಲ್ಲಿಯೇ ಸಾವಯವ ಉತ್ಪನ್ನಗಳ ಉತ್ಪಾದನೆಂಯಲ್ಲಿ ನಮ್ಮ ರಾಜ್ಯವು ಮೂರನೇ ಸ್ಥಾನದಲ್ಲಿರುತ್ತದೆ.
ರಾಜ್ಯದ 57 ತಾಲ್ಲೂಕುಗಳ ವ್ಯಾಪ್ತಿಯಲ್ಲಿ 2.75 ಲಕ್ಷ ಹೆಕ್ಟೇರ್​ ಮಳೆಯಾಶ್ರಿತ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ 642 ಕೋಟಿ ರೂ. ವೆಚ್ಚದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದಿ ಘಟಕ-2.0ನ್ನು ಜಾರಿಗೊಳಿಸಲಾಗುವುದು. ಬಳ್ಳಾರಿ ಜಿಲ್ಲೆಯು ಹಗರಿಯಲ್ಲಿ ಒಂದು ಹೊಸ ಕೃಷಿ ಕಾಲೇಜನ್ನು ಡಿ.ಎಂ.ಎಫ್ ಮತ್ತು ಕೆ.ಆರ್​.ಡಿ.ಬಿ ಅನುದಾನಗಳನ್ನು ಸಂಯೋಜಿಸಿ ಸ್ಥಾಪಿಸಲಾಗುವುದು.ಇದಲ್ಲದೇ, ಬೆಳಗಾವಿ ಜಿಲ್ಲೆಯ ಥಣಿ ತಾಲ್ಲೂಕಿನಲ್ಲಿ ಒಂದು ಹೊಸ ಕೃಷಿ ಕಾಲೇಜನ್ನು ಸ್ಥಾಪಿಸಲು ಯೋಜಿಸಲಾಗಿದೆ.
ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಬೆಳೆಯುವ ವಿಶಿಷ್ಟವಾದ ಭೌಗೋಳಿಕ ಸೂಚ್ಯಂಕ ಹೊಂದಿದ ತೊಗರಿಬೇಳೆಯನ್ನು “ಭೀಮಾ ಪಲ್ಸ್” ಬ್ರಾಂಡ್‍ನಡಿ ಮಾರಾಟ ಮಾಡಲು ಉದ್ದೇಶಿಸಲಾಗಿದೆ. ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ “ಡಾ. ಎಸ್.ವಿ. ಪಾಟೀಲ್ ಕೃಷಿ ಸಂಶೋಧನೆ, ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ” ವನ್ನು ಸ್ಥಾಪಿಸಲಾಗುವುದು.
ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಹಾಗೂ ಇತರ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಕೃಷಿ ಪ್ರಶಸ್ತಿ ಮತ್ತು ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲಾಗುವುದು. ರಾಜ್ಯದಲ್ಲಿ ತೋಟಗಾರಿಕೆ ಬೆಳೆಗಳ ವಿಸ್ತೀರ್ಣವು 26.32 ಲಕ್ಷ ಹೆಕ್ಟೇರ್‍ಗಳಾಗಿದ್ದು, ದೇಶದಲ್ಲಿಯೇ ಮೊದಲನೇ ಸ್ಥಾನವನ್ನು ಹೊಂದಿದೆ. 2021-22ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ 1.38 ಲಕ್ಷ ಫಲಾನುಭವಿಗಳಿಗೆ 240 ಕೋಟಿ ರೂ. ಸಹಾಯಧನವನ್ನು ನೀಡಿದ್ದು, ತೋಟಗಾರಿಕೆ ಸಾಗುವಳಿ ಕ್ಷೇತ್ರವನ್ನು 34,700 ಹೆಕ್ಟೇರ್ ಪ್ರದೇಶಕ್ಕೆ ವಿತರಿಸಲಾಗಿದೆ. ಆಧುನಿಕ ತಂತ್ರಜ್ಞಾನವನ್ನು ಪರಿಚಯಿಸಲು 1,255 ಹೆಕ್ಟೇರ್ ಪ್ರದೇಶದಲ್ಲಿ ಸಂರಕ್ಷಿತ ಬೇಸಾಯ ಪದ್ಧತಿಯನ್ನು ಪ್ರೋತ್ಸಾಹಿಸಲಾಗಿದೆ ಹಾಗೂ ರೈತರಿಗೆ ಯೋಗ್ಯ ದರದಲ್ಲಿ 48 ಲಕ್ಷ ಸಸಿ-ಕಸಿಗಳನ್ನು ವಿತರಿಸಲಾಗಿದೆ.
ಕೋವಿಡ್-19 ರಿಂದಾಗಿ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಾರರಿಗಾದ ನಷ್ಟಕ್ಕೆ 46 ಕೋಟಿ ರೂ.ಗಳನ್ನು ಪ್ರಸಕ್ತ ಸಾಲಿನಲ್ಲಿ ಪರಿಹಾರ ರೂಪದಲ್ಲಿ 97 ಸಾವಿರಕ್ಕೂ ಹೆಚ್ಚು ರೈತರಿಗೆ ವಿತರಿಸಲಾಗಿದೆ. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಗ್ರೀನ್ ಸ್ಪೇಸ್‍ಗೆ ಬೇಡಿಕೆ ಹೆಚ್ಚು ತ್ತಿರುವ ಹಿನ್ನೆಲೆಯಲ್ಲಿ, ಪ್ರಪ್ರಥಮ ಬಾರಿಗೆ ನಮ್ಮ ಸರ್ಕಾರವು ಲಾಲ್‍ಬಾಗ್-ಕಬ್ಬನ್ ಪಾರ್ಕ್‍ಗಳ ಮಾದರಿಯಲ್ಲಿ ವಿವಿಧೋದ್ದೇಶ “ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ”ವನ್ನು ಯಲಹಂಕ ಬಳಿಯ ಜಾರಕಬಂಡೆ ಕಾವಲ್ ಪ್ರದೇಶದ 350 ಎಕರೆ ಸರ್ಕಾರಿ ಜಮೀನಿನಲ್ಲಿ ಅಭಿವೃದ್ಧಿಗೊಳಿಸಲಾಗುವುದು. ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.90ರಷ್ಟು ಹಾಗೂ ಇತರೆ ವರ್ಗದ ರೈತರಿಗೆ ಶೇ.75ರಷ್ಟು ಸಹಾಯಧನ ನೀಡಲಾಗುವುದು.
ವಿಜಯಪುರ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ದ್ರಾಕ್ಷಿ ಬೆಳೆಯಲಾಗುತ್ತದೆ. ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿಯ ಮೂಲಕ ತೊರವಿ ಗ್ರಾಮದಲ್ಲಿ 35 ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಅತ್ಯಾಧುನಿಕ ಶೈತ್ಯಸಂಗ್ರಹ ಸೌಲಭ್ಯವನ್ನು ಪಿ.ಪಿ.ಪಿ ಆಧಾರದ ಮೇಲೆ ನಿರ್ಮಿಸಿ, ದ್ರಾಕ್ಷಿ ಬೆಳೆಯ ಸಂಗ್ರಹಣೆ, ಸಂಸ್ಕರಣೆ ಮತ್ತು ಸಾಗಣೆಯನ್ನು ವೈಜ್ಞಾನಿಕವಾಗಿ ನಿರ್ವಹಿಸಲು ಶೀತಲೀಕೃತ ಸರಕು ಸಾಗಣೆ ವಾಹನಗಳನ್ನು ಒದಗಿಸಲಾಗುವುದು.
ಅಂತರ್ಜಲದ ವಿವೇಚನಾರಹಿತ ಬಳಕೆಯನ್ನು ತಪ್ಪಿಸಲು ಆಯಾ ಪ್ರದೇಶದ ಅಂತರ್ಜಲ ಲಭ್ಯವಾಗುವ ಆಳ, ಇಳುವರಿ ಹಾಗೂ ಅಂತರ್ಜಲ ಮರು ಪೂರಣಗೊಳ್ಳುವ ಮಾಹಿತಿಯನ್ನು ಒಳಗೊಂಡ ಅಂತರ್ಜಲ ಲಭ್ಯತಾ ನಕ್ಷೆಗಳನ್ನು ತಂಯಾರಿಸುವ ಯೋಜನೆಯನ್ನು ಪ್ರಾಯೋಗಿಕವಾಗಿ ಒಂದು ಜಿಲ್ಲೆಯಲ್ಲಿ ಜಾರಿಗೊಳಿಸಲಾಗುವುದು.
ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 2022-23ನೇ ಸಾಲಿನಲ್ಲಿ ಒಟ್ಟಾರೆಯಾಗಿ 33,700 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 6 =
Remember me
