ಬೆಂಗಳೂರು:ವರುಣಾದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳಮೈತ್ರಿ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಈ ವಿಚಾರವಾಗಿ ಸಿಎಂ ಬೊಮ್ಮಾಯಿ ಪ್ರತ್ಯುತ್ತರ ನೀಡಿದ್ದಾರೆ.
ಸಿದ್ದರಾಮಯ್ಯಗೆ ಸಿಎಂ ಕೌಂಟರ್ ನೀಡಿದ್ದು “ಎಲ್ಲ ಅಭ್ಯರ್ಥಿಗಳೂ ತಾವೇ ಗೆಲ್ಬೇಕು ಅಂತ ಚುನಾವಣೆಯಲ್ಲಿ ನಿಲ್ಲುವುದು. ಸಿದ್ದರಾಮಯ್ಯಗೆ ಈಗ ಭಯ ಹುಟ್ಟಿಕೊಂಡಿದೆ. ಒಳ ಮೈತ್ರಿನಾ, ಹೊರ ಮೈತ್ರಿನಾ ಅಂತ ಮಾತಾಡ್ತಿದಾರೆ. ಅಲ್ಲಿ ಎಲ್ಲ ಪಕ್ಷಗಳಿಂದಲೂ ಅಭ್ಯರ್ಥಿಗಳು ಫಿಕ್ಸ್ ಆಗಿದಾರೆ.
ಅವರಿಗೆ ಭಯ ಬಂದಿದೆ, ಅವರಿಬ್ರೂ ಸೇರಿಕೊಂಡಿದಾರೆ ಅನ್ನೋ ಭಯ ಬಂದಿದೆ. ಯಾರ್ಯಾರು ಸೇರಿಕೊಂಡರೂ ಸಿದ್ದರಾಮಯ್ಯ ಗೆ ಸ್ವಂತ ಬಲ ಇದ್ರೆ ಗೆಲ್ತಾರೆ. ಇಲ್ಲಾಂದ್ರೆ ಗೆಲ್ಲಲ್ಲ. ನನ್ನ ಕ್ಷೇತ್ರ ಶಿಗ್ಗಾಂವಿಯಲ್ಲೂ ಕಾಂಗ್ರೆಸ್- ಜೆಡಿಎಸ್ ಸೇರಿಕೊಂಡಿದ್ದಾರೆ. ಇದರಿಂದ ನನಗೇನೂ ಭಯವಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಬದಲಾಯಿಸಿದ್ದು ನನ್ನ ಮೇಲೆ ವ್ಯತ್ಯಾಸ ಆಗಲ್ಲ.
ಎಲ್ಲರೂ ಕಾಂಗ್ರೆಸ್​ ಟಿಕೆಟ್​ಗೆ ಪ್ರಯತ್ನ ಮಾಡ್ತಿದ್ರು. ಕಾಂಗ್ರೆಸ್​ನ ಒಬ್ಬರಿಗೆ ಜೆಡಿಎಸ್ ಟಿಕೆಟ್ ಕೊಟ್ಟಿದೆ. ಇದನ್ನು ನಾನು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅನ್ನಲಾ? ನಾನು ಈ ಥರ ಆರೋಪ ಎಲ್ಲ ಮಾಡಲ್ಲ. ಯಾರು ಯಾರ ಜತೆಗಾದರೂ ಸೇರಿಕೊಳ್ಳಲಿ. ನಾನು ನನ್ನ ಸ್ವಂತ ಬಲದಿಂದ ಗೆಲ್ತೇನೆ. ಸಿದ್ದರಾಮಯ್ಯ ವರುಣಾದಿಂದ ಆರೇಳು ಸಲ ಗೆದ್ದು ಬಂದವರು. ಈ ಮೊದಲು ಅವರಿಗೆ ಕ್ಚೇತ್ರದ ಅನಿಶ್ಚಿತತೆ ಇತ್ತು. ಈಗ ಅವರಿಗೆ ಕ್ಷೇತ್ರದ ಒಳಗಡೆ ಅನಿಶ್ಚಿತತೆ ಇದೆ” ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
