ಹಾವೇರಿ:ಮತದಾನೋತ್ತರ ಸಮೀಕ್ಷೆಗಳು (ಎಕ್ಸಿಟ್ ಪೋಲ್) ಒಂದೊಂದು ರೀತಿ ಫಲಿತಾಂಶವನ್ನು ತೋರಿಸುತ್ತಿವೆ. ನಮ್ಮ ಪಕ್ಷದ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಪ್ರಕಾರ ನಾವು ಸಂಪೂರ್ಣ ಬಹುಮತ ಪಡೆಯುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.
ಬುಧವಾರ ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದೂ ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಸರದಿ ಸಾಲಿನಲ್ಲಿ ನಿಂತು ವಾಪಸ್​ ಆದ ಮತದಾರರು; 8,000 ಸಾವಿರ ಜನರಿಗೆ ಒಂದೇ ಕೇಂದ್ರ!
ಚುನಾವಣೆಯ ನಿಜವಾದ ಫಲಿತಾಂಶಕ್ಕೆ ಮೇ 13ರವರೆಗೆ ಕಾಯೋಣ. ರೆಸಾರ್ಟ್‌ ರಾಜಕೀಯ ನಡೆಯುವ ಸಾಧ್ಯತೆ ಇಲ್ಲ. ಈ ಬಾರಿ ಅತಂತ್ರ ಫಲಿತಾಂಶ ಬರುವ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಜೆಡಿಎಸ್ ಕಿಂಗ್ ಮೇಕರ್ ಆಗುವ ಅವಶ್ಯಕತೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
