ಬೆಂಗಳೂರು:ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವುದು ದುಃಖ ತರಿಸಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸವದಿ ಅವರು ಕಾಂಗ್ರೆಸ್​ಗೆ ಹೋಗ್ತಿರೋದು ದುಃಖ ತರಿಸಿದೆ. ಅವರು ನಿನ್ನೆ ಘೋಷಣೆ ಮಾಡಿದ್ರಲ್ಲ. ಅವರಿಗೆ ಅಲ್ಲಿ ರಾಜಕೀಯ ಭವಿಷ್ಯ ಕಂಡಿದೆ. ಸಹಜವಾಗಿ ರೂಲಿಂಗ್ ಪಾರ್ಟಿಯಲ್ಲಿ ಆಕಾಂಕ್ಷಿಗಳು ಹೆಚ್ಚಾಗಿರುತ್ತಾರೆಂದು ಹೇಳಿದ್ದಾರೆ.
ಕಾರ್ಯಕರ್ತರು ನಮ್ಮ ಪರವಾಗಿದ್ದಾರೆ ಬಿಜೆಪಿ ಗೆಲ್ಲಲಿದೆ. ಕೆಲವರು ಶಾಸಕರಾಗಬೇಕು ಅಂತ ಪಕ್ಷ ಬಿಡುತ್ತಾರೆ. ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಬದ್ಧರಾಗಿದ್ದಾರೆ. ಮೂರನೇ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ. ನಾನು ನಾಳೆ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಹಿಂಡಲಗಾ ಜೈಲಿನಲ್ಲಿರುವ ಜೆ.ಹೆಚ್.ಪೂಜಾರ ನನ್ನ ಕೊಲೆ ಮಾಡಲು ಸ್ಕೆಚ್ ಹಾಕಿದ್ದಾನೆ: ಕೆ.ಎಸ್.ಈಶ್ವರಪ್ಪರಾಜಧಾನಿಯಲ್ಲಿ ಬಂಡಾಯ ನಾಯಕರ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿಯಿಂದ ಟಿಕೆಟ್‌ ವಂಚಿತರಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಸೇರ್ಪಡೆ ಖಚಿತವಾಗಿದ್ದು, ಪಕ್ಷದ ನಾಯಕರಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನಿಟ್ಟಿದ್ದಾರೆ ಎನ್ನಾಲಾಗಿದೆ. ಇಂದು ಬೆಂಗಳೂರಿಗೆ ಆಗಮಿಸಿದ ಸವದಿ ಕಾಂಗ್ರೆಸ್‌ ಹಿರಿಯ ನಾಯಕರಾದ ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಾಲ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ದುಡುಕಿನಿಂದ ಪಕ್ಷ ತೊರೆದವರಿಗೆ ಬಿಜೆಪಿ ಬಾಗಿಲು ಬಂದ್: ಅರುಣ್ ಸಿಂಗ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − fourteen =
Remember me
