ಬೆಂಗಳೂರು: ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಗೆ ಭಯ ಹುಟ್ಟಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವರುಣಾದಲ್ಲಿ ಬಿಜೆಪಿ ಜೆಡಿಎಸ್ ಒಳಮೈತ್ರಿ ಎಂದು ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಎಲ್ಲ ಪಕ್ಷಗಳಿಂದಲೂ ಅಭ್ಯರ್ಥಿಗಳು ಫಿಕ್ಸ್ ಆಗಿದಾರೆ ಎಂಬಭಯವಿದ್ದು, ಅವರಿಬ್ಬರೂ ಸೇರಿಕೊಂಡಿದಾರೆ ಎಂಬ ಭಯ ಬಂದಿದೆ ಎಂದ ಅವರು ಎಲ್ಲ ಅಭ್ಯರ್ಥಿಗಳೂ ತಾವೇ ಗೆಲ್ಲಬೇಕು ಎಂದು ಚುನಾವಣೆಯಲ್ಲಿ ನಿಲ್ಲುತ್ತಾರೆ ಎಂದಿದ್ದಾರೆ.
ಇದನ್ನೂ ಓದಿ:ತಾಯಿಯಾಗುತ್ತಿರುವ ಖುಷಿ ಹಂಚಿಕೊಂಡ ಇಲಿಯಾನಾ! ಗೋವಾ ಬ್ಯೂಟಿಗೆ ಹರಿದುಬಂತು ಪ್ರಶ್ನೆಗಳ ಸುರಿಮಳೆ
ಸ್ವಂತ ಬಲದಿಂದ ಗೆಲ್ಲುತ್ತೇನೆ:ಯಾರೂ ಸೇರಿಕೊಂಡರೂ ಸಿದ್ದರಾಮಯ್ಯ ಅವರಿಗೆ ಸ್ವಂತ ಬಲ ಇದ್ದಾರೆ ಗೆಲ್ಲುತ್ತಾರೆ. ಇಲ್ಲದಿದ್ದರೆ ಗೆಲ್ಲುವುದಿಲ್ಲ.ನನ್ನ ಕ್ಷೇತ್ರ ಶಿಗ್ಗಾಂವಿಯಲ್ಲೂ ಕಾಂಗ್ರೆಸ್- ಜೆಡಿಎಸ್ ಸೇರಿಕೊಂಡಿದ್ದಾರೆ. ಇದರಿಂದ ನನಗೇನೂ ಭಯವಿಲ್ಲಕಾಂಗ್ರೆಸ್ ಅಭ್ಯರ್ಥಿ ಬದಲಾಯಿಸಿದ್ದು ನನ್ನ ಮೇಲೆ ವ್ಯತ್ಯಾಸ ಆಗುವುದಿಲ್ಲ. ಎಲ್ಲರೂ ಕಾಂಗ್ರೆಸ್​ಗೆ ಪ್ರಯತ್ನ ಮಾಡುತ್ತಿದ್ದರು. ಕಾಂಗ್ರೆಸ್ ನ ಒಬ್ಬರಿಗೆ ಜೆಡಿಎಸ್ ಟಿಕೆಟ್ ಕೊಟ್ಟಿದೆ. ಇದನ್ನು ನಾನು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಎನ್ನಲಾ? ನಾನು ಈ ಥರ ಆರೋಪ ಎಲ್ಲ ಮಾಡುವುದಿಲ್ಲ ಎಂದರು. ಯಾರು ಯಾರ ಜತೆಗಾದರೂ ಸೇರಿಕೊಳ್ಳಲಿ. ನಾನು ನನ್ನ ಸ್ವಂತ ಬಲದಿಂದ ಗೆಲ್ಲುತ್ತೇನೆ ಎಂದರು.
ಇದನ್ನೂ ಓದಿ:ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ನಟಿ ಐಶ್ವರ್ಯಾ ಪುತ್ರಿ ಆರಾಧ್ಯ!
ಕ್ಷೇತ್ರದೊಳಗೆ ಅನಿಶ್ಚಿತತೆ:ಸಿದ್ದರಾಮಯ್ಯ ವರುಣಾದಿಂದ ಆರೇಳು ಸಲ ಗೆದ್ದು ಬಂದವರು.ಈ ಮೊದಲು ಅವರಿಗೆ ಕ್ಷೇತ್ರದ ಅನಿಶ್ಚಿತತೆ ಇತ್ತು. ಈಗ ಕ್ಷೇತ್ರದ ಒಳಗಡೆ ಅನಿಶ್ಚಿತತೆ ಇದೆ ಎಂದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + sixteen =
Remember me
