ಬೆಂಗಳೂರು:ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಅವರೊಬ್ಬ ಹಿರಿಯ ನಾಯಕ. ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಆ ಸಂದರ್ಭದಲ್ಲಿ “ಇಂದು ಬಸವ ಜಯಂತಿ. ಇಂದಿನಿಂದ ನಮ್ಮ ಪ್ರಚಾರ ಆರಂಭಿಸುತ್ತಿದ್ದೇವೆ. ನಾವು ಬಸವ ತತ್ವದಡಿ ಆಡಳಿತ ನಡೆಸಿದ್ದೇವೆ. ಅದರ ಮೂಲಕವೇ ಪ್ರಚಾರ ಆರಂಭಿಸುತ್ತೇವೆ. ಸಿದ್ದರಾಮಯ್ಯ ಅವರು ಒಬ್ಬ ಹಿರಿಯ ನಾಯಕರಾಗಿ ಈ ರೀತಿಯ ಹೇಳಿಕೆ ನೀಡಬಾರದಿತ್ತು. ಅವರವರ ಸಮಾಜದ ನಾಯಕರು ಅವರ ಯೋಗ್ಯತೆ, ಕ್ಷಮತೆಯಲ್ಲಿ ಕೆಲಸ ಮಾಡುತ್ತಾರೆ. ಅವರ ಘನತೆಗೆ ಇದು ತಕ್ಕ ಹೇಳಿಕೆ ಅಲ್ಲ” ಎಂದರು.
“ರಾಹುಲ್ ಗಾಂಧಿ ಅವರು ಈ ಹಿಂದೆ ಮೋದಿ ಅವರ ಹೆಸರಿಗೆ ಕೊಟ್ಟ ಹೇಳಿಕೆಯ ರೀತಿಯಲ್ಲಿ ಸಿದ್ದರಾಮಯ್ಯ ಈಗ ಮಾತಡಿದ್ದಾರೆ. ಮುಂದಿನ ದಿನಗಳಲ್ಲಿ ಜನತೆ ಇದಕ್ಕೆ ಉತ್ತರ ಕೊಡುತ್ತಾರೆ. ತಕ್ಕ ಪಾಠ ಕಲಿಸುತ್ತಾರೆ” ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 11 =
Remember me
