ಮುಧೋಳ:ಲಿಂಗಾಯತರನ್ನು ಕಡೆಗಣಿಸುತ್ತಾ ಬಂದಿರುವ ಕಾಂಗ್ರೆಸ್​ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ವಾಗ್ದಾಳಿ ನಡೆಸಿದ್ಧಾರೆ.
ಬಾಗಲಕೋಟೆಯ ಮುಧೋಳದಲ್ಲಿ ಮಂಗಳವಾರ ಸಚಿವ ಗೋವಿಂದ ಖಾರಜೋಳ ನಾಮಪತ್ರ ಸಲ್ಲಿಕೆಗೂ ಮುನ್ನ ಮಾತನಾಡಿದ ಅವರು ಕಾಂಗ್ರೆಸ್​​ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.
ಚುನಾವಣೆ ಸಮಯದಲ್ಲಿ ಮಾತ್ರ ಕಾಂಗ್ರೆಸ್​ಗೆ ಲಿಂಗಾಯತರು ನೆನಪಾಗುತ್ತಾರೆ. 1967ರ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್​ ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಲ್ಲ. ವೀರೇಂದ್ರ ಪಾಟೀಲ್​ ಅವರಿಗೆ ಅಪಮಾನ ಮಾಡಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು.
ಲಿಂಗಾಯತ ನಾಯಕರ ಮೇಲೆ ಅಷ್ಟು ಪ್ರೀತಿ ಇರುವವರು ನಿಮ್ಮ ಪಕ್ಷದ ನಾಯಕರಾದ ಎಸ್​.ಆರ್​. ಪಾಟೀಲ್​ ಅವರನ್ನು ಯಾಕೆ ಕಡೆಗಣಿಸುವ ಮೂಲಕ ಯಾಕೆ ಮೂಲೆಗುಂಪು ಮಾಡಿದ್ದೀರಾ ಎಂದು ಪ್ರಶ್ನಿಸಿದ್ಧಾರೆ.
ಇದನ್ನೂ ಓದಿ:ಕಾಂಗ್ರೆಸ್​ಗೆ ಗೆಲ್ಲುವ ಅಭ್ಯರ್ಥಿಗಳಲ್ಲ, ನಿಲ್ಲುವ ಅಭ್ಯರ್ಥಿಗಳೇ ಸಿಗುತ್ತಿಲ್ಲ: ಬಿಜೆಪಿ ವ್ಯಂಗ್ಯ
2018ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಲಿಂಗಾಯತ ಸಮಾಜವನ್ನು ಒಡೆಯಲು ಹೊರಟಿದ್ದವರಿಗೆ ಈಗ ಪ್ರೀತಿ ಉಕ್ಕಿ ಹರಿಯುತ್ತಿದೆ. 2009ರಲ್ಲಿ ಲಿಂಗಾಯತರಿಗೆ 2A ಮೀಸಲಾತಿ ಸಲುವಾಗಿ ಪ್ರಸ್ಥಾವನೆಯನ್ನು ಸಲ್ಲಿಸಲಾಗಿತ್ತು. ಆದರೆ, ಕೇಂದ್ರದಲ್ಲಿ ಇದ್ದ ಕಾಂಗ್ರೆಸ್​ ಸರ್ಕಾರ ಅದನ್ನು ಕಾಂಗ್ರೆಸ್​ ತಿರಸ್ಕರಿಸಿತ್ತು ಎಂದು ಆರೋಪಿಸಿದ್ದಾರೆ.
ನಮ್ಮ ಸರ್ಕಾರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದೆ. ಬಿಜೆಪಿ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ. ಕೃಷ್ಣ ಮೇಲ್ದಂಡೆ ಯೋಜನೆ ಹಿನ್ನಡೆಗೂ ಕಾಂಗ್ರೆಸ್​ ಅವರೇ ಕಾರಣ ಎಂದು ಕಿಡಿಕಾರಿದ್ದಾರೆ.
ಇನ್ನು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್​ ಸವದಿ ಕಾಂಗ್ರೆಸ್​ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿ ಇದರಿಂದ ಪಕ್ಷಕ್ಕೆ ಯಾವುದೇ ನಷ್ಟ ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ಜಗದೀಶ್​ ಶೆಟ್ಟರ್​ಗೆ ಟಿಕೆಟ್​ ತಪ್ಪಲು ಬಿ.ಎಲ್​.ಸಂತೋಷ್ ಕಾರಣ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ ಅವರು ಮಾಡಿರುವ ಆರೋಪ ಸರಿ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 20 =
Remember me
