ಕಲಬುರಗಿ:ಪಿಎಸ್​ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ದೂರು ಬಂದ ತಕ್ಷಣವೇ ಕೂಲಂಕುಶ ತನಿಖೆಗೆ ನಾವೇ ಸಿಐಡಿ ತನಿಖೆಗೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಡಿ.ಆರ್ .ಮೈದಾನದಲ್ಲಿ ಮಾತನಾಡಿದ ಅವರು, ಉತ್ತರ ಪತ್ರಿಕೆಯಲ್ಲಿ ವ್ಯತ್ಯಾಸ ಬಂದಿದ್ದರಿಂದ ಪ್ರಕರಣವನ್ನು ಸಿಐಡಿಗೆ ನಾವೇ ನೀಡಿದ್ದೇವೆ.ಸಿಐಡಿ ಅಧಿಕಾರಿಗಳು ಹಲವಾರು ತಂಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ಸದ್ಯ ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಪರಾರಿಯಾಗಿದ್ದು, ಕಾಂಗ್ರೆಸ್​ ಸಾಸಕ ಎಂ.ವೈ ಪಾಟೀಲ್​​ ಅವರ ಗನ್ ಮ್ಯಾನ್​ ಹಯ್ಯಾಳಿ ದೇಸಾಯಿ ಅವರಿಗೆ ಸಹಾಯ ಮಾಡಿದ ರುದ್ರೇಗೌಡ ಪಾಟೀಲ್​ ಬಂಧನವಾಗಿದೆ ಎಂದರು.ಇನ್ನಷ್ಟು ಆಳವಾಗಿ ತನಿಖೆ ಮಾಡಲು ಸೂಚಿಸಲಾಗಿದೆ.ಯುಪಿಎಸ್ಸಿ ಮಾದರಿಯಲ್ಲಿ ಪರೀಕ್ಷೆ ನಡೆಯಬೇಕು ಅನ್ನೋ ರೀತಿ ವ್ಯವಸ್ಥೆ ಮಾಡಲಾಗಿತ್ತು ಇಂತಹ ಪಾರದರ್ಶಕತೆ ಇದ್ದಾಗಲು ಅಕ್ರಮವಾಗಿ ಪರೀಕ್ಷೆ ಬರೆದಿರುವುದು ಅಚ್ಚರಿಯಾಗಿದೆ ಎಂದರು.
ಇನ್ನು ಪ್ರಕರಣದಲ್ಲಿ ಕೇಳಿ ಬಂದ ಮಹಿಳೆ ದಿವ್ಯಾ ಹಾಗರಗಿ ನಮ್ಮ ಪಕ್ಷದಲ್ಲಿ ಯಾವುದೇ ಜವಾಬ್ದಾರಿ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.ಯಾರೇ ತಪ್ಪು ಮಾಡಿದ್ರು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.ಬೇರೆ ಪಕ್ಷದವರು ಯಾವ ರೀತಿ ಈ ಹಿಂದೆ ಪ್ರಕರಣ ಮುಚ್ಚಿ ಹಾಕಿದ್ದಾರೆ ಎಂಬುದು ಗೊತ್ತಿದೆ.ಮರು ಪರೀಕ್ಷೆ ನಡೆಸಬೇಕಾ ಅಥವಾ ಬೇಡವಾ ಅನ್ನೋದರ ಬಗ್ಗೆ ಮಧ್ಯಂತರ ವರದಿ ಬಂದ ನಂತರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಪಿಎಸ್​ಐ ನೇಮಕಾತಿಯಲ್ಲಿ ಅಕ್ರಮ ಕೇಸ್​: ಮತ್ತಿಬ್ಬರು ಪೊಲೀಸರ ಬಂಧನ, ಇಂಜಿನಿಯರ್ ಮನೆ ಮೇಲೆ ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 13 =
Remember me
