ಬೆಂಗಳೂರು:ಸಿಡಿ ಯುವತಿ ಬೆಂಗಳೂರಿನಲ್ಲಿ ವಿಶೇಷ ಕೋರ್ಟ್ ಎದುರು ಹಾಜರಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಜಿಲ್ಲೆ ಪ್ರವಾಸ ಮೊಟುಕುಗೊಳಿಸಿ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಿದ್ದಾರೆ.
ಪೂರ್ವ ನಿಗದಿತ ವೇಳಾಪಟ್ಟಿ ಪ್ರಕಾರ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು. ಶಾಸಕರು ಹಾಗೂ ಪಕ್ಷದ ಮುಖಂಡರ ಜತೆಗೆ ಸಂಜೆ ಏರ್ಪಡಿಸಿರುವ ಸಭೆಯಲ್ಲಿ ಪಾಲ್ಗೊಂಡು ಕ್ಷೇತ್ರದ ವಸ್ತುಸ್ಥಿತಿ, ತಯಾರಿ ಮಾಹಿತಿ ಪಡೆದು ಚುನಾವಣೆ ಕಾರ್ಯತಂತ್ರ ಕುರಿತು ಚರ್ಚೆ ನಡೆಸಲಿದ್ದರು. ಮಂಗಳವಾರ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿದ್ದರು. ಬುಧವಾರ ಬೆಳಗ್ಗೆ ಅಲ್ಲಿಂದ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಬೇಕಾಗಿತ್ತು.
ಇದನ್ನೂ ಓದಿ:ಮತ್ತೆ ಇಳಿಯಿತು ಚಿನ್ನ, ಬೆಳ್ಳಿ ದರ! ಚಿನ್ನಾಭರಣ ಪ್ರಿಯರು ಫುಲ್​ ಖುಷ್​…
ಆದರೆ, ಶಾಸಕರು ಹಾಗೂ ಮುಖಂಡರ ಸಭೆ ದಿಢೀರ್‌ನೆ ರದ್ದುಪಡಿಸಿ, ಬೆಳಗಾವಿಯಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತಲುಪಿ, ಸಿಎಂ ಬೆಂಗಳೂರಿಗೆ ಮರಳುತ್ತಿರುವುದು ಕುತೂಹಲ ಕೆರಳಿಸಿದೆ.
ಸಿಡಿ ಯುವತಿ ಕೋರ್ಟ್ ಎದುರು ಹಾಜರಾಗಿ ಕೋರ್ಟ್‌ಗೆ ಹೇಳಿಕೆ ನೀಡಿರುವ ಕಾರಣ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉದ್ವೇಗಕ್ಕೆ ಒಳಗಾಗಿದ್ದು, ಈ ಬೆಳವಣಿಗೆ ರಾಜಕೀಯವಾಗಿ ಸಿಎಂ ಬಿಎಸ್‌ವೈಗೆ ತಲೆ ಬಿಸಿ ತಂದೊಡ್ಡಿದೆ ಎಂದು ಮೂಲಗಳು ಹೇಳಿವೆ.
ಸರ್ಕಾರಕ್ಕೆ ಎರಡು ದಿನಗಳ ಗಡುವು- ಇಲ್ಲದಿದ್ದರೆ ಸಾರಿಗೆಯಲ್ಲಿ ವ್ಯತ್ಯ: ಪ್ರಯಾಣಿಕರಿಗೆ ತಟ್ಟಲಿದೆ ಬಸ್‌ ಬಿಸಿ

28 ದಿನದ ಬಳಿಕ ಕೋರ್ಟ್​ನಲ್ಲಿ ಸಿಡಿ ಲೇಡಿ ಪ್ರತ್ಯಕ್ಷ! ರಮೇಶ್​ ಜಾರಕಿಹೊಳಿ ಎದೆಯಲ್ಲಿ ಢವಢವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
