ಉತ್ತರಕನ್ನಡ:ಸೋಮವಾರ ಸಚಿವರಿಗೆ ಖಾತೆಗಳನ್ನು ಹಂಚಲಾಗುತ್ತದೆ. ಇಂದು ಮತ್ತು ನಾಳೆ ಸರ್ಕಾರಿ ರಜೆ ಇರುವ ಹಿನ್ನೆಲೆಯಲ್ಲಿ ಘೋಷಣೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿರಸಿ ತಾಲೂಕಿನ ಬನವಾಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಈಗಾಗಲೇ ಖಾತೆ ನಿರ್ಧರಿಸಿದ್ದು ಸೋಮವಾರ ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಕೆಲವರು ತಿರುಕನ ಕನಸನ್ನ ಕಾಣುತ್ತಿದ್ದಾರೆ. ಅದಕ್ಕೆ ನಾನು ಹೆಚ್ಚು ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಮಧ್ಯಂತರ ಚುನಾವಣೆ ಬರುತ್ತದೆ ಎಂದು ಮಾಜಿ ಡಿಸಿಎಂ ಪರಮೇಶ್ವರ್ ಹೇಳಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿದರು.
ಪರಮೇಶ್ವರ್ ಅವರು ಹಿರಿಯ ವ್ಯಕ್ತಿಗಳು. ಇಂತಹ ಹೇಳಿಕೆಯನ್ನ ಕೊಡುವ ಮೂಲಕ ಅವರ ಘನತೆಯನ್ನ ಕಡಿಮೆ ಮಾಡಿಕೊಳ್ಳಬಾರದು. ಮೂರು ವರ್ಷ ವಿರೋಧ ಪಕ್ಷದಲ್ಲಿ ಕೂರಬೇಕೆಂದು ಕೆಲವರು ಹತಾಶರಾಗಿದ್ದಾರೆ. ಅದಕ್ಕಾಗಿ ದಿನಕ್ಕೊಂದು ಹೇಳಿಕೆಯನ್ನು ಕೊಡುತ್ತಿದ್ದಾರೆ. ಅದರ ಬಗ್ಗೆ ಹೆಚ್ಚು ಮಾತನಾಡುವುದು ಬೇಡ ಎಂದು ಯಡಿಯೂರಪ್ಪ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − three =
Remember me
