ಬೆಂಗಳೂರು:ಸಿಎಂ ಗೃಹ ಕಚೇರಿ ಕೃಷ್ಣಾ, ಖಾಸಗಿ ನಿವಾಸ ಧವಳಗಿರಿಯಲ್ಲಿ ಒಟ್ಟು 7 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಬಿ.ಎಸ್​. ಯಡಿಯೂರಪ್ಪ ಅವರು ಹೋಂ ಕ್ವಾರಂಟೈನ್​ಗೆ ಒಳಪಟ್ಟಿದ್ದಾರೆ.
ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾವನ್ನು ಸ್ಯಾನಿಟೈಸ್​ ಮಾಡಲಾಗಿದೆ. ಇಂದಿನಿಂದ ಕೆಲ ದಿನಗಳ ಕಾಲ ಗೃಹ ಕಚೇರಿ ಬದಲು ತಮ್ಮ ನಿವಾಸದಿಂದಲೇ ಕರ್ತವ್ಯ ನಿರ್ವಹಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಅಲ್ಲಿಂದಲೇ ವೀಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನೂ ನೀಡಲಿದ್ದಾರೆ.ಇದನ್ನೂ ಓದಿರಿಹೋಟೆಲ್​ ಬಾಗಿಲಲ್ಲೇ ಶವ ಕಂಡು ಬೆಚ್ಚಿಬಿದ್ದ ಸ್ಥಳೀಯರು!
‘ಯಾರೂ ಆತಂಕ ಪಡುವ ಅಗತ್ಯವಿಲ್ಲ, ನಾನು ಆರೋಗ್ಯವಾಗಿ ಇದ್ದೇನೆ. ಎಲ್ಲರೂ ಕರೊನಾದಿಂದ ದೂರವಿರಲು ಮುನ್ನೆಚ್ಚರಿಕೆಯ ಕ್ರಮ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋರಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾ ಮತ್ತು ಕಾವೇರಿ ನಿವಾಸದಲ್ಲಿ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಈಗಾಲೇ ಬಿಬಿಎಂಪಿ ಸಿಬ್ಬಂದಿ ಸ್ಯಾನಿಟೈಸರ್‌ ಸಿಂಪಡಿಸಿದ್ದಾರೆ. ಕೆಲ ದಿನಗಳ ಕಾಲ ಮನೆಯಿಂದಲೇ ಸಿಎಂ ಕಾರ್ಯನಿರ್ವಹಿಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಗತ್ಯ ಸಲಹೆಗಳನ್ನು ಪಾಲಿಸುತ್ತೇವೆ
— Dr Sudhakar K (@mla_sudhakar)July 10, 2020

ಸಿಎಂ ಗೃಹ ಕಚೇರಿ ಕೃಷ್ಣಾ, ಧವಳಗಿರಿ ನಿವಾಸದಲ್ಲಿ ಒಟ್ಟು ಹತ್ತು ಮಂದಿಗೆ ಕೊರನಾ ಪಾಸಿಟಿವ್​ ಬಂದಿದೆ. ಇವರ ನಿಕಟ ಸಂಪರ್ಕಿಗಳ ಜತೆಗೆ ಸಿಎಂ ಮತ್ತು ರಾಜಕೀಯ ಮುಖಂಡರಲ್ಲೂ ಸೋಂಕಿನ ಭೀತಿ ಆವರಿಸಿದೆ. ಗನ್​ ಮ್ಯಾನ್, ಅಡುಗೆ ಸಿಬ್ಬಂದಿ, ಎಲೆಕ್ಟ್ರಿಕ್ ಆಪರೇಟರ್, ಸ್ವಚ್ಛತಾ ಸಿಬ್ಬಂದಿಯಲ್ಲೂ ಸೋಂಕು ದೃಢಪಟ್ಟಿದೆ.
ಬೆಂಗಳೂರಲ್ಲಿ 1928ರಲ್ಲೇ ಕಾಣಿಸಿಕೊಂಡಿತ್ತೊಂದು ರೋಗ… ಆಗಿನ ಕೌನ್ಸಿಲ್ ಆಡಳಿತ ಹೊರಡಿಸಿದ್ದ ಆದೇಶ ಪ್ರತಿ ಈಗ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
