ಬೆಂಗಳೂರು:ಜಾಗತಿಕವಾಗಿ ಭೀಕರತೆ ಸೃಷ್ಟಿಸಿರುವ ಮಾರಕ ಕೊರೊನಾ ವೈರಸ್​ ಹರಡುವ ಸಾಧ್ಯತೆಯನ್ನು ತಡೆಗಟ್ಟಲು ನಮ್ಮ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ತಿಳಿಸಿದರು.
ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವರವಾದ ಮಾಹಿತಿ ನೀಡಿದರು.
ಪರಿಶೀಲನೆ ನಡೆಸಿದ್ದೇನೆಕಳೆದ ಕೆಲವು ದಿನಗಳಿಂದ ಹಲವು ದೇಶಗಳನ್ನು ಬಾಧಿಸಿರುವ ನಾವೆಲ್ ಕೊರೊನಾ ವೈರಸ್ ಅನ್ನು ವಿಶ್ವ ಆರೋಗ್ಯ ಸಂಸ್ಥೆಯು ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಣೆ ಮಾಡಿದೆ. ಕಳೆದ ಎರಡು ದಿನಗಳಲ್ಲಿ ಕರ್ನಾಟಕದಲ್ಲಿ ನಾಲ್ಕು ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ಪರಿಸ್ಥಿತಿ ಹಾಗೂ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ರಾಜ್ಯದಲ್ಲಿ ಈ ಸೋಂಕು ಹರಡುವ ಸಾಧ್ಯತೆಯನ್ನು ತಡೆಗಟ್ಟಲು ನಮ್ಮ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
4 ಮಾದರಿಗಳು ಪಾಸಿಟಿವ್ಈ ವರೆಗೆ ಕರೋನಾ ವೈರಸ್ ಸೋಂಕು ಇರುವ ದೇಶಗಳಿಂದ ಪ್ರಯಾಣಿಸಿರುವ ಹಾಗೂ ಸೋಂಕಿತರ ಸಂಪರ್ಕದಲ್ಲಿದ್ದ 1048 ಜನರನ್ನು ಅವಲೋಕನೆಗಾಗಿ ಗುರುತಿಸಲಾಗಿದೆ. ಈ ವರೆಗೆ ರೋಗ ಲಕ್ಷಣ ಇರುವ 446 ಮಾದರಿಗಳನ್ನು ಪರೀಕ್ಷೆಗಾಗಿ ಕಳಿಸಲಾಗಿದೆ. 389 ಮಾದರಿಗಳು ನೆಗೆಟಿವ್ ಎಂದು ವರದಿಯಾಗಿದ್ದು, 4 ಮಾದರಿಗಳು ಪಾಸಿಟಿವ್ ಎಂದು ತಿಳಿದುಬಂದಿದೆ. ಬಾಕಿ ಮಾದರಿಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದರು.
ತಪಾಸಣೆ ಕಟ್ಟುನಿಟ್ಟಾಗಿ ನಡೆಸಲು ಸೂಚನೆಯುಎಸ್‍ನಿಂದ ಬಂದ ಟೆಕ್ಕಿ, ಅವರ ಪತ್ನಿ, ಮಗು ಸೋಂಕಿತರು. ಇವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಂಡಿದ್ದಾರೆ. ಮತ್ತೊಬ್ಬ ವ್ಯಕ್ತಿಗೆ ಸೋಂಕು ತಗುಲಿರುವುದು ಖಚಿತಪಟ್ಟಿದೆ. ಸೋಂಕಿತರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗುತ್ತಿದೆ. ಬೆಂಗಳೂರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಹಾಗೂ ಕಾರವಾರ ಕಡಲ ಬಂದರುಗಳಲ್ಲಿ ಸುಮಾರು 95 ಸಾವಿರಕ್ಕೂ ಹೆಚ್ಚು ಪ್ರಯಾಣಿಕರ ತಪಾಸಣೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ಕಟ್ಟುನಿಟ್ಟಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ರಜೆ ಘೋಷಣೆಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಶಿಶುವಿಹಾರ, ಎಲ್‍ಕೆಜಿ, ಯುಕೆಜಿ ಶಾಲೆಗಳು, ಅಂಗನವಾಡಿಗಳಿಗೂ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.
ರಕ್ತ ಪರೀಕ್ಷೆಯ ಸೌಲಭ್ಯ ಕಲ್ಪಿಸಲಾಗಿದೆಪ್ರತಿ ದಿನ ವೈದ್ಯಕೀಯ ಶಿಕ್ಷಣ ಸಚಿವರು, ಆರೋಗ್ಯ ಸಚಿವರು ಅಧಿಕಾರಿಗಳ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್​ಗಳನ್ನು ಸ್ಥಾಪಿಸಲಾಗಿದೆ. ಕರ್ನಾಟಕದಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಬೆಂಗಳೂರು ಘಟಕ ಹಾಗೂ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ರಕ್ತ ಪರೀಕ್ಷೆಯ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಆತಂಕಕ್ಕೆ ಒಳಗಾಗುವುದು ಬೇಡಮೈಸೂರು, ಹಾಸನ ಹಾಗೂ ಶಿವಮೊಗ್ಗ ಮೆಡಿಕಲ್ ಕಾಲೇಜುಗಳ ಪ್ರಯೋಗಾಲಯಗಳಲ್ಲಿ ಸೋಂಕು ಪರೀಕ್ಷೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸೋಂಕಿತರ ಚಿಕಿತ್ಸೆಗೆ 700 ಹಾಸಿಗೆಗಳನ್ನು ಗುರುತಿಸಲಾಗಿದೆ. 600-700 ಜನರ ತಾತ್ಕಾಲಿಕ ಕ್ವಾರಂಟೈನ್ ಸೌಲಭ್ಯ ಕಲ್ಪಿಸಲಾಗಿದೆ. ಸರ್ಜಿಕಲ್ ಮಾಸ್ಕ್, ಔಷಧಿ ಇತ್ಯಾದಿ ಯಾವುದೇ ಕೊರತೆ ಇಲ್ಲ. ಎಲ್ಲರೂ ಮಾಸ್ಕ್ ಧರಿಸುವ ಅಗತ್ಯ ಇಲ್ಲ. ಸೋಂಕಿತರು ಮತ್ತು ಅವರ ನಿಕಟ ಸಂಪರ್ಕ ಹೊಂದಿರುವವರು ಮಾಸ್ಕ್ ಧರಿಸಿದರೆ ಸಾಕು. ಜನರು ಆತಂಕಕ್ಕೆ ಒಳಗಾಗುವುದು ಬೇಡವೆಂದು ಧೈರ್ಯ ತುಂಬಿದರು.
ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಹೆಚ್ಚು ಹಣ ವಸೂಲಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಡ್ರಗ್ ಕಂಟ್ರೋಲರ್ ಅವರಿಗೆ ಸೂಚಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಈ ಸೋಂಕು ಹರಡದಂತೆ ತಡೆಗಟ್ಟುವುದು ನಮ್ಮ ಆದ್ಯತೆಯಾಗಿದೆ. ಇದಕ್ಕೆ ಜನರು ಸಹಕರಿಸಬೇಕು ಎಂದು ನಾನು ವಿನಂತಿಸುತ್ತೇನೆ. ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ತಿಳಿಸಿದರು.
ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಿಚೀನಾ, ಇರಾನ್, ದಕ್ಷಿಣ ಕೊರಿಯಾ, ಜಪಾನ್, ಇಟಲಿ ಅಥವಾ ಇತರ ಬಾಧಿತ ದೇಶಗಳಿಂದ ಅಥವಾ ಅವುಗಳ ಮೂಲಕ ಪ್ರಯಾಣಿಸಿದವರು ಹತ್ತಿರದ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು ಅಥವಾ ಆರೋಗ್ಯ ಸಹಾಯವಾಣಿ 104 ಕ್ಕೆ ಕರೆ ಮಾಡಬೇಕು. ಈ ದೇಶಗಳಿಂದ ಅಥವಾ ಈ ದೇಶಗಳ ಮೂಲಕ ಹಿಂತಿರುಗಿದವರು ಬಂದ ದಿನದಿಂದ 14 ದಿನಗಳ ಕಾಲ ಪ್ರತ್ಯೇಕವಾಗಿರಬೇಕು. ಈ ಅವಧಿಯಲ್ಲಿ ಉಸಿರಾಟದ ತೊಂದರೆ, ಕೆಮ್ಮು, ನೆಗಡಿ, ಗಂಟಲ ಉರಿಯೂತ ಅಥವಾ ಯಾವುದೇ ಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯಕೀಯ ನೆರವು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೆ ಪಾಲಿಸಿಈ ಸೋಂಕು ಹರಡದಂತೆ ರಾಜ್ಯ ಸರ್ಕಾರ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ನಾಗರಿಕರು ಆತಂಕ ಪಡಬೇಕಾಗಿಲ್ಲ. ಆರೋಗ್ಯ ಇಲಾಖೆ ಸೂಚಿಸುವ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೆ ಪಾಲಿಸುವ ಮೂಲಕ ಈ ಸೋಂಕನ್ನು ತಡೆಗಟ್ಟಲು ಸಹಕರಿಸಬೇಕೆಂದು ಕೋರಿದರು.

ರಾಜ್ಯದಲ್ಲಿ ಓರ್ವ ಟೆಕ್ಕಿಯಿಂದ ಮೂವರಿಗೆ ಹರಡಿದ ಕೊರೊನಾ ವೈರಸ್​; ನಾವಿದ್ದೇವೆ ಹೆದರಬೇಡಿ ಎಂದು ಜನರಿಗೆ ಧೈರ್ಯ ತುಂಬಿದ ಡಾ. ಸುಧಾಕರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
