ಬೆಂಗಳೂರು:ನಿನ್ನೆ ಮತ್ತು ಮೊನ್ನೆಗೆ ಹೋಲಿಸಿದರೆ, ಇಂದು ಕರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿರುವುದು ಸ್ವಲ್ಪ ಸಮಾಧಾನ ತಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ತಿಳಿಸಿದರು.
ಸೋಂಕಿತರ ಸಂಖ್ಯೆ ಇಳಿಕೆಶನಿವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕೋವಿಡ್-19 ನಿರ್ವಹಣೆ ಕುರಿತಂತೆ ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದೇವೆ. ಮೊನ್ನೆ ಒಂದೇ ದಿನ 36 ಹಾಗೂ ನಿನ್ನೆ 44 ಪ್ರಕರಣಗಳು ವರದಿಯಾಗಿದ್ದವು. ಆದರೆ, ಇಂದು 12 ಪ್ರಕರಣಗಳು ಮಾತ್ರ ಧೃಡವಾಗಿವೆ. ಹೀಗಾಗಿ ಇಂದು ಸ್ವಲ್ಪ ಸಮಾಧಾನ ತಂದಿದೆ ಎಂದರು.
ದ್ವಿಚಕ್ರ ವಾಹನ ಸಂಚಾರಕ್ಕೆ ಅವಕಾಶಸಭೆಯಲ್ಲಿ ಏಪ್ರಿಲ್ 20ರ ಬಳಿಕ ತೆಗೆದುಕೊಳ್ಳಬೇಕಾದ ಕ್ರಮದ ಕುರಿತು ಚರ್ಚೆ ನಡೆಸಲಾಯಿತು. ಕಂಟೈನ್ಮೆಂಟ್ ಜೋನ್​ನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಅವರ ಮನೆಗೆ ಆಹಾರ ಸಾಮಗ್ರಿಗಳನ್ನು ಒದಗಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಟೈನ್ಮೆಂಟ್ ಜೋನ್ ಇಲ್ಲದ ಪ್ರದೇಶದಲ್ಲಿ ದ್ವಿಚಕ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುವುದೆಂದು ತಿಳಿಸಿದರು.
ಮೇ 3 ರವರೆಗೂ ನಿಷೇದಾಜ್ಞೆಮೇ 3ರವರೆಗೆ ಪಾಸ್ ಮುಂದುವರೆಯಲಿದೆ. ಅಗತ್ಯವಸ್ತುಗಳ ಸಾಗಾಟಕ್ಕೆ ಯಾವುದೇ ತೊಂದರೆ ಇಲ್ಲ. ಜಲ್ಲಿ ಹಾಗೂ ಮರಳು ಸಾಗಾಟಕ್ಕೂ ತೊಂದರೆ ಇಲ್ಲ. ಎಸ್ಇಜೆಡ್​ನಲ್ಲಿ ಕೈಗಾರಿಕೆಗಳ ಆರಂಭಕ್ಕೆ ಯಾವುದೇ ಅಡ್ಡಿ ಇಲ್ಲ. ಅಂತರಾಜ್ಯ ಓಡಾಟಕ್ಕೂ ಅನುಮತಿ ಇಲ್ಲ. ಮೇ 3 ರವರೆಗೂ ನಿಷೇದಾಜ್ಞೆ ಮುಂದುವರೆಯಲಿದೆ ಎಂದರು.
ಕಟ್ಟಡ ನಿರ್ಮಾಣಕ್ಕೆ ಅನುಮತಿಕಟ್ಟಡ ಕಾರ್ಮಿಕರ ಅನುಕೂಲಕ್ಕಾಗಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ. ಏಪ್ರಿಲ್ 20ರ ಬಳಿಕ ಕಟ್ಟಡ ನಿರ್ಮಾಣ ಮುಂದುವರೆಸಬಹುದು. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ರಸ್ತೆ, ಕಟ್ಟಡ ಕಾಮಗಾರಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ಸೇರಿದಂತೆ 8 ಹಾಟ್​ಸ್ಪಾಟ್ ಜೆಲ್ಲೆಗಳು ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ಲಾಕ್​ಡೌನ್​ನಲ್ಲಿ ಸ್ವಲ್ಪ ಸಡಿಲವಾಗುತ್ತದೆ. ಐಟಿ ಬಿಟಿಗಳಲ್ಲಿ ಶೇ 33 ರಷ್ಡು ಸಿಬ್ಬಂದಿ ಹಾಜರಾಗಲು ಅನುಮತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 32 ಕಂಟೈನ್ಮೆಂಟ್ ಝೋನ್​ ರಚಿಸಲಾಗಿದೆ. ಮೇ 3ರವರೆಗೂ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ. ನಂತರ ಪರಿಶೀಲಿಸಲಾಗುವುದು ಎಂದರು.(ದಿಗ್ವಿಜಯ ನ್ಯೂಸ್​)
ರೋಗಿಗೆ ಅವಶ್ಯವಿರುವ ಮಾತ್ರೆಗಳನ್ನು ಪೂರೈಸಿ ಮಾನವೀಯತೆ ಮೆರೆದ ಉಪಸಭಾಪತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
