ಬೆಂಗಳೂರು:ಕರೊನಾ ಸಾಂಕ್ರಾಮಿಕದ ನಡುವೆ ಸವಾಲು ಸ್ವೀಕರಿಸಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ರಾಜ್ಯ ಸರ್ಕಾರ ರಾಷ್ಟ್ರದ ಗಮನ ಸೆಳೆದಿದೆ. ಇದೇ ವೇಳೆ, ಸವಾಲುಗಳ ನಡುವೆ ಯಶಸ್ವಿಯಾಗಿ ಪರೀಕ್ಷೆ ನಡೆಯಲು ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗಬಾರದು ಎಂದು ರಾಜ್ಯ ಸರ್ಕಾರ ಟೊಂಕಕಟ್ಟಿ ನಿಂತು ಜೂ.25ರಿಂದ ಜು. 3ರವರೆಗೆ ಅತ್ಯಂತ ಯಶಸ್ವಿಯಾಗಿ ನಡೆಸಿದ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದೆ. ಆತಂಕ ಮೀರಿ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿವಿದ್ಯಾರ್ಥಿನಿಯರಿಗೆ ನನ್ನ ಶುಭಕಾಮನೆಗಳು ಎಂದು ಸಿಎಂ ಹೇಳಿದ್ದಾರೆ. ಹಿಂದೆಂದೂ ಕಾಣದ, ಕೇಳರಿಯದಂಥ ಕರೊನಾ ಸವಾಲಿನ ಪರಿಸ್ಥಿತಿಗಳಲ್ಲಿ ಪರೀಕ್ಷೆ ಬರೆಯಲು ಮಕ್ಕಳನ್ನು ಸಿದ್ಧಗೊಳಿಸಿದ ತಮ್ಮೆಲ್ಲರ ಕೊಡುಗೆಗೆ ಹಾಗೂ ರಾಜ್ಯ ಸರ್ಕಾರದ ಮೇಲಿನ ತಮ್ಮ ವಿಶ್ವಾಸಕ್ಕೆ ನಾನು ಋಣಿ ಎಂದು ಪೋಷಕರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ತಮ್ಮ ಮುಂದಿನ ವಿದ್ಯಾಭ್ಯಾಸ ಸುಗಮವಾಗಿ ನಡೆಯಲಿ, ತಮಗೆ ಉಜ್ವಲ ಭವಿಷ್ಯ ಲಭಿಸಲಿ. ಫಲಿತಾಂಶದಲ್ಲಿ ಹಿನ್ನಡೆ ಕಂಡ ಮಕ್ಕಳು ಧೃತಿಗೆಡದೆ ಮತ್ತಷ್ಟು ಪರಿಶ್ರಮ-ಆತ್ಮವಿಶ್ವಾಸದಿಂದ ಸಿದ್ಧತೆ ನಡೆಸಿ, ಪೂರಕಪರೀಕ್ಷೆಗಳನ್ನು ಎದುರಿಸಿ ಉತಿ್ತೕರ್ಣರಾಗಲಿ ಎಂದು ಹಾರೈಸಿದ್ದಾರೆ. ಪರೀಕ್ಷೆ ಯಶಸ್ವಿಯಾಗಿ ನಡೆಸಲು ಸಹಕರಿಸಿದ ಶಿಕ್ಷಕ ವೃಂದಕ್ಕೆ, ಪ್ರಮುಖವಾಗಿ ಸುರಕ್ಷಿತ ಮತ್ತು ಯಶಸ್ವಿಯಾಗಿ ಪರೀಕ್ಷೆಗಳು ನಡೆಯಲು ಕಾರಣಕರ್ತರಾದ ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸಾರಿಗೆ ವ್ಯವಸ್ಥೆ ಮಾಡಿದ ಡಿಸಿಎಂ ಲಕ್ಷ ಣ ಸವದಿ ಸೇರಿ ಎಲ್ಲ ಸಚಿವರಿಗೆ, ಅಧಿಕಾರಿ ಮತ್ತು ಸಿಬ್ಬಂದಿಗೆ ಅಭಿನಂದನೆ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 4 =
Remember me
