ಬೆಂಗಳೂರು:ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್​ವೈ ಸಡಿಲ ಮಾಡಿರುವ ನಿರ್ಬಂಧಗಳ ಕುರಿತು ಮಾಹಿತಿ ನೀಡಿದರು.
1. ರಾಜ್ಯದಲ್ಲಿ Positivity Rate ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ.
2. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ 14-06-2021ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ 21-06-2021ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve + thirteen =
Remember me
