ಬೆಂಗಳೂರು:ಬಜೆಟ್ ಮಂಡನೆ ವೇಳೆ ಸಭಾತ್ಯಾಗ ನಡೆಸಿದ ಕಾಂಗ್ರೆಸ್ ವಿರುದ್ಧ ಸಿಎಂ ಬಿಎಸ್ ಯಡಿಯೂರಪ್ಪ ಹರಿಹಾಯ್ದಿದ್ದಾರೆ.
ದೇಶದಲ್ಲಿ ಯಾವುದಾದರೂ ವಿರೋಧ ಪಕ್ಷ ಬಜೆಟ್ ಮಂಡನೆ ವೇಳೆ ಬಾಯ್ಕಾಟ್ ಮಾಡಿರುವ ಉದಾಹರಣೆ ಇದೆಯಾ..? ನಾನು ಸಿದ್ದರಾಮಯ್ಯಗೆ ಸವಾಲು ಹಾಕ್ತೇನೆ, ಮುಂಬರುವ ಚುನಾವಣೆಯಲ್ಲಿ ನಾವು 135 ಸ್ಥಾನ ಗೆದ್ದು, ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆ. ಇಲ್ಲ ಎಂದರೆ ನೀವು ನನ್ನನ್ನು ಯಡಿಯೂರಪ್ಪ ಎಂದು ಕರೀಬೇಡಿ ಎಂದು ಏರಿದ ದನಿಯಲ್ಲಿ ಹೇಳಿದರು.
ಇದನ್ನೂ ಓದಿ:ಹಿಂಬಾಗಿಲಿನಿಂದ ಅಧಿಕಾರ ಹಿಡಿದ ಬಿಎಸ್‌ವೈ : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯ
ನೈತಿಕತೆ ವಿಚಾರ ಇಟ್ಟುಕೊಂಡು ಸಭಾತ್ಯಾಗ ಮಾಡುತ್ತಿರುವುದಾಗಿ ಪ್ರತಿಪಕ್ಷ ನಾಯಕರು ಹೇಳಿದ್ದಾರೆ ಎಂಬ ಪತ್ರಕರ್ತರ ಹೇಳಿಕೆಗೆ ಗರಂ ಆದ ಸಿಎಂ, ಏನು ನೈತಿಕತೆ ಅಂತ ಅವ್ರು ಪ್ರಶ್ನೆ ಮಾಡೋದು? ಅವರ ತಲೆ… ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಡಿ ತನಿಖೆ ಬಗ್ಗೆ ಕೇಳಿದ ಪ್ರಶ್ನೆಗೆ, ವಿಧಾನಸಭೆಯಲ್ಲಿ ಈ ವಿಚಾರ ಚರ್ಚೆಯಾಗಲಿ, ಪ್ರತಿಪಕ್ಷದವರು ಸಲಹೆ ಕೊಡಲಿ ತನಿಖೆಗೆ ಸಿದ್ಧ ಎಂದರು. ಸಿದ್ದರಾಮಯ್ಯ ಅವರ ಅವಧಿಯಲ್ಲಿ ಏನೇನಾಗಿದೆ ಎಲ್ಲವನ್ನೂ ಅಧಿವೇಶನದಲ್ಲಿ ಬಿಚ್ಚಿಡುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದೇ ವೇಳೆ ದನಿಗೂಡಿಸಿದರು.
ಬಜೆಟ್ ಭಾಷಣ ಅಂತ್ಯ: ನಾಳೆಗೆ ಸದನ ಮುಂದೂಡಿಕೆ

ಬಜೆಟ್: ಹೊಸ ತೆರಿಗೆಗೆ ತಡೆ: ಹೊಸ ಸಾಲಕ್ಕೆ ನಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + seventeen =
Remember me
