ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಸಚಿವ ಸಂಪುಟ ಸಭೆ ನಡೆದಿದ್ದು, ಇದಕ್ಕೂ ಮುನ್ನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಮಹತ್ವದ ವಿಚಾರ ಬಗ್ಗೆ ಮಾಹಿತಿ ನೀಡಿದರು.
ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸುವ ಬಗ್ಗೆ ಇಂದು ಸಿಎಂ ತೀರ್ಮಾನ ಮಾಡಬೇಕಿತ್ತು. ಆದರೆ ಅವರು ಒಬಿಸಿಗೆ ಸೇರಿಸುವ ಶಿಫಾರಸಿನಿಂದ ಸದ್ಯಕ್ಕೆ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ಅವರೇ ಮಾತನಾಡಿದ್ದು, ನಾನು ದೆಹಲಿಗೆ ಹೋಗಿ ಬಂದ ನಂತರ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಮಿತ್ ಷಾ ಜತೆ ಈಗಷ್ಟೇ ಮಾತನಾಡಿದ್ದೇನೆ. ಇನ್ನೆರಡು ದಿನದಲ್ಲಿ ಪಟ್ಟಿ ಬರಲಿದೆ ಎಂದರು.
ವೀರಶೈವ ಲಿಂಗಾಯತ ವಿಚಾರ ಕ್ಯಾಬಿನೆಟ್ ಅಜೆಂಡಾ ನೋಡಿ ಹೈಕಮಾಂಡ್ ಶಾಕ್ ಆಗಿದೆ. ಹಾಗಾಗಿ ಶುಕ್ರವಾರ ಬೆಳಗ್ಗೆಯೇ ಸಿಎಂ ಯಡಿಯೂರಪ್ಪಗೆ ಕರೆ ಮಾಡಿ ಮಾತುಕತೆ ನಡೆಸಿದ ಅಮಿತ್ ಷಾ, ಸದ್ಯ ಯಾವುದೇ ಸಮುದಾಯದ ನಿರ್ಧಾರ ಬೇಡ. ಎರಡ್ಮೂರು ದಿನದಲ್ಲಿ ಸಂಪುಟ ವಿಚಾರದಲ್ಲಿ ಗ್ರೀನ್ ಸಿಗ್ನಲ್ ಕೊಡ್ತೀವಿ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ನಿಗಮ ಮಂಡಳಿಗೆ ಸರಣಿ ನೇಮಕ ಮಾಡಿದ್ದ ಬಿಎಸ್​ವೈ ಶುಕ್ರವಾರ ತುರ್ತು ಸಂಪುಟ ಸಭೆಯ ಜತೆಗೆ ರಾಜ್ಯದ ಸಂಸದರ ಸಭೆಯನ್ನೂ ಕರೆದಿದ್ದರು. ಇಂದೇ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದೂ ಹೇಳಲಾಗಿತ್ತು. ಇದೀಗ ಕೇಂದ್ರದ ಜತೆ ಮಾತನಾಡಿ ಸಾಧಕ-ಬಾಧಕಗಳ ಬಗ್ಗೆ ಸಮಾಲೋಚಿಸಲು ಸಿಎಂ ನಿರ್ಧರಿಸಿದ್ದಾರೆ.(ದಿಗ್ವಿಜಯ ನ್ಯೂಸ್)
ಬಂಡೀಪುರ ಹೆಬ್ಬಾಗಿಲು ದಾಟುವ ಮುನ್ನವೇ ನಿಂತ ಐರಾವತ​! 2 ಕಿ.ಮೀ. ರಸ್ತೆಯುದ್ದಕ್ಕೂ ಟೆನ್ಷನ್​

ಅಯ್ಯೋ, ಅಮ್ಮ ಬೇಗ ಬಾ.. ಹಸುಗಳು ಕೂಗುತ್ತಿವೆ… ಎನ್ನುತ್ತ ಒಳಗೆ ಬಂದ ಮಗನಿಗೆ ಕಾದಿತ್ತು ಶಾಕ್​!

ದುಡ್ಡು ಸಿಗುತ್ತೆ ಅಂತ ಗಂಡನ ಮನೆಗೆ ಓಡೋಡಿ ಬಂದವಳು ಆ ಮನೆಯಲ್ಲೇ ಹೆಣವಾದಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + fourteen =
Remember me
