ಶಿವಮೊಗ್ಗ:ಶಿಕಾರಿಪುರ ತಾಲೂಕು ಮಲ್ಲೇನಹಳ್ಳಿಯ ವಿದ್ಯಾರ್ಥಿನಿ ತನುಜಾ ಕರೇಗೌಡ್ರ ಬುಧವಾರ ನೀಟ್​ಗೆ ಹಾಜರಾಗಲು ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ನೆರವಾದರು.
ಕೋವಿಡ್ ಕಾರಣಕ್ಕೆ ತನುಜಾ ನೀಟ್ ಬರೆಯಲು ಸಾಧ್ಯವಾಗಿರಲಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕರೊನಾ ಕಾರಣ ಅವಕಾಶ ವಂಚಿತರಿಗಾಗಿ ಮತ್ತೊಮ್ಮೆ ನೀಟ್ ಬರೆಯಲು ವ್ಯವಸ್ಥೆ ಮಾಡಿದರೂ ತಾಂತ್ರಿಕ ಕಾರಣಗಳಿಂದ 2ನೇ ಅವಕಾಶದಲ್ಲೂ ವಂಚಿತರಾಗುವ ಭೀತಿ ಎದುರಾಗಿತ್ತು. ಸಮಸ್ಯೆ ಬಗ್ಗೆ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಗೆ ನೆರವಾಗುವಂತೆ ಸಚಿವರಿಗೆ ಸಿಎಂ ಸೂಚಿಸಿದರು. ಡಾ.ಕೆ.ಸುಧಾಕರ್ ಎನ್​ಟಿಎ ತಾಂತ್ರಿಕ ನಿರ್ದೇಶಕರೊಂದಿಗೆ ಚರ್ಚೆ ಮಾಡಿ ಬೆಂಗಳೂರಿನ ಬಸವನಗುಡಿ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + eleven =
Remember me
