ಬೆಂಗಳೂರು:ಲಾಕ್​ಡೌನ್ ಇನ್ನಷ್ಟು ಸಡಿಲಿಕೆ ವಿಷಯದಲ್ಲಿ ತುರ್ತಾಗಿ ಆಗಬೇಕಾದ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರ ತನ್ನ ಅಭಿಪ್ರಾಯವನ್ನು ಕೇಂದ್ರಕ್ಕೆ ತಿಳಿಸಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಅನಿಸಿಕೆಯನ್ನು ತಿಳಿಸಿದರು. ಆರ್ಥಿಕ ಚಟುವಟಿಕೆ ಮತ್ತಷ್ಟು ಚುರುಕಾಗಲು ಇನ್ನಷ್ಟು ವಿನಾಯಿತಿ ಅಗತ್ಯತೆ ಇದೆ ಎಂದು ಪ್ರಸ್ತಾಪಿಸಿದರೆಂದು ತಿಳಿದುಬಂದಿದೆ.
ಸಿನಿಮಾ ಮಂದಿರ, ಜಿಮ್ ಕ್ಲಬ್, ಬಾರ್, ಪ್ರವಾಸೋದ್ಯಮ ಪುನರಾರಂಭಿಸಲು ಅವಕಾಶ ಬೇಕು, ಸಭೆ ಸಮಾರಂಭಗಳಿಗೆ ಹೇರಿರುವ ಮಿತಿ ಕೊಂಚ ಸಡಿಲಿಸಬೇಕೆಂಬ ಅಭಿಪ್ರಾಯವನ್ನು ಸರ್ಕಾರ ಹೊಂದಿದ್ದು, ಕೇಂದ್ರಕ್ಕೆ ವರದಿ ರೂಪದಲ್ಲಿ ರವಾನಿಸಲಿದೆ. ದೆಹಲಿಯಿಂದ ಕೇಂದ್ರ ಗೃಹ ಇಲಾಖೆ ಅಧಿಕಾರಿಗಳ ಹಂತದ ವಿಡಿಯೋ ಕಾನ್ಪರೆನ್ಸ್ ನಡೆಸಿ ವಿವರಣೆ ಕೇಳಲಿದ್ದಾರೆ. ಬಳಿಕ ಮಾರ್ಗಸೂಚಿ ಹೊರಡಲಿದೆ. ಸಂವಾದದಲ್ಲಿ ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ 5ಟಿ ತತ್ವ ವಿವರಿಸಿದ ಮುಖ್ಯಮಂತ್ರಿ, ಪ್ರಸ್ತುತ 1 ಲಕ್ಷ ಸೋಂಕಿತರ ಚಿಕಿತ್ಸೆಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದ್ದು, 2 ಲಕ್ಷಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ. 673 ಫೀವರ್ ಕ್ಲಿನಿಕ್​ಗಳನ್ನು ಸ್ಥಾಪಿಸುವ ಮೂಲಕ ಆಸ್ಪತ್ರೆಗಳು ಸೋಂಕು ಹರಡುವ ತಾಣವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.
ರಾಜ್ಯದ 1.68 ಕೋಟಿ ಕುಟುಂಬ ಗಳಲ್ಲಿ 1.5 ಕೋಟಿ ಕುಟುಂಬಗಳ ಸಮೀಕ್ಷೆ ನಡೆಸಿದ್ದು, ಕರೊನಾ ಸೋಂಕಿನಿಂದ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವ ವ್ಯಕ್ತಿಗಳ ಮಾಹಿತಿ ದಾಖಲಿಸಲಾಗಿದೆ. ಪ್ರಯೋಗಾಲಯಗಳ ಸಂಖ್ಯೆಯನ್ನು 72ಕ್ಕೆ ಹೆಚ್ಚಿಸಿದ್ದು, ಪರೀಕ್ಷಾ ಸಾಮರ್ಥ್ಯವನ್ನು ದಿನಕ್ಕೆ 15 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರತಿ ದಶಲಕ್ಷ ಜನಸಂಖ್ಯೆಗೆ ರಾಜ್ಯದಲ್ಲಿ 7500 ಪರೀಕ್ಷೆ ನಡೆಸಲಾಗುತ್ತಿದ್ದು, ಶೇ.1.6 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ದೈನಂದಿನ ಬೆಳವಣಿಗೆ ದರ ಶೇ.3.6 ಇದೆ ಎಂದು ಪ್ರಧಾನಿಗೆ ಮಾಹಿತಿ ನೀಡಿದರು. ಕೋವಿಡ್ ವಾರ್ ರೂಂ ಸ್ಥಾಪನೆ ಮೂಲಕ ಸೋಂಕು ನಿಯಂತ್ರಣ ಪ್ರಕ್ರಿಯೆ ಮೇಲೆ ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ರಾಜ್ಯದ ಎಲ್ಲ ಭಾಗಗಳಲ್ಲಿಯೂ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಟೆಲಿ ಐಸಿಯು ವ್ಯವಸ್ಥೆ ರೂಪಿಸಲಾಗಿದ್ದು, ತಜ್ಞ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸಲಹೆ, ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ವಿವರಿಸಿದರು.
ಅನ್​ಲಾಕ್​ನತ್ತ ಹೆಜ್ಜೆ:ಕರೊನಾ ವಿರುದ್ಧದ ಹೋರಾಟದಲ್ಲಿ ವಿವಿಧ ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಪ್ರಧಾನಿ, ಕೋವಿಡ್ ನಿಯಂತ್ರಣ ದೊಂದಿಗೆ ಆರ್ಥಿಕ ಚಟುವಟಿಕೆಗಳ ಪುನಶ್ಚೇತನಕ್ಕೆ ರಾಜ್ಯಗಳು ಒತ್ತು ನೀಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯಗಳು ಇನ್ನು ಅನ್​ಲಾಕ್​ನತ್ತ ಹೆಜ್ಜೆಯಿಡಬೇಕು. ನಿರ್ಬಂಧ ಕಡಿಮೆಯಾಗಿ, ಚಟುವಟಿಕೆಗಳು ಚುರುಕಾಗಲಿ ಎಂದು ಸಲಹೆ ನೀಡಿದರು.
ಇಂದು ರಾಜ್ಯದಲ್ಲಿ ಮಾಸ್ಕ್ ದಿನಾಚರಣೆ :ಕರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಜಾಗೃತಿ ಮೂಡಿಸುವ ಪ್ರಯುಕ್ತ ಜೂ.18ರಂದು ರಾಜ್ಯಾದ್ಯಂತ ‘ಮಾಸ್ಕ್ ದಿನ’ ಆಚರಿಸಲಾಗುತ್ತಿದೆ. ರಾಜ್ಯದ ಪ್ರತಿ ಪ್ರಜೆಗೂ ಮಾಸ್ಕ್ ಕಡ್ಡಾಯವಾಗಿ ಧರಿಸುವ ಕುರಿತ ಜಾಗೃತಿಗಾಗಿ ಎಲ್ಲ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಮತ್ತು ಮಹಾನಗರ ಪಾಲಿಕೆಗಳಲ್ಲಿ ‘ಮಾಸ್ಕ್ ದಿನ’ ಆಚರಣೆ ಮಾಡಲಾಗುತ್ತಿದೆ.
ಪಾದಯಾತ್ರೆ ಮೂಲಕ ಜಾಗೃತಿ:ಈ ಮಾಸ್ಕ್ ದಿನಾಚರಣೆಯಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಚುನಾಯಿತ ಜನಪ್ರತಿನಿಧಿಗಳು, ಗಣ್ಯವ್ಯಕ್ತಿಗಳು, ವೈದ್ಯಕೀಯ ಸಿಬ್ಬಂದಿ ಒಳಗೊಂಡು ಸುಮಾರು 50 ಜನರು ಮೀರದಂತೆ ನಿರ್ದಿಷ್ಟ ಪ್ರದೇಶಗಳಲ್ಲಿ ಪಾದಾಯಾತ್ರೆ ಕೈಗೊಂಡು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವಂತೆ ಜಾಗೃತಿ ಮೂಡಿಸಲಿದ್ದಾರೆ.
https://www.vijayavani.net/murder-convicts-presence-at-wedding-of-kerala-cms-daughter-kicks-up-row/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
