ಬೆಂಗಳೂರು: ಬಜರಂಗ ದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಅವರು ಹೃದಯಾಘಾತಕ್ಕೆ ಒಳಗಾಗಿ ಶನಿವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿ ಟ್ವೀಟ್ ಕೂಡ ಮಾಡಿದ್ದಾರೆ.
ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರ ಅಗಲಿಕೆ ನೋವು ತಂದಿದೆ. ಬಜರಂಗದಳದ ಮಾಜಿ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಿಎಸ್​ವೈ ಪ್ರತಿಕ್ರಿಯಿಸಿದ್ದಾರೆ.
ಕರೊನಾ ತಡೆಯುವ ಹೋರಾಟ ಈ ಸಂದರ್ಭದಲ್ಲಿ ಸಿಎಂ ಬಿಎಸ್​ವೈ ಅವರ ನಿರ್ಣಯಗಳನ್ನು ಟೀಕಿಸುವ ಕೆಲಸ ಆಗುತ್ತಿದ್ದ ಬಗ್ಗೆ ಮಹೇಂದ್ರ ಕುಮಾರ್ ಅವರು ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೆ, ಈಗಿನ ಸನ್ನಿವೇಶದಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ವರ್ತನೆಯನ್ನೂ ಮಹೇಂದ್ರ ಕುಮಾರ್​ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಟೀಕಿಸಿದ್ದರು. ಈ ಕಾರ್ಯಕ್ರಮದ ವಿಡಿಯೋ ನಿನ್ನೆ ಅಪ್ಲೋಡ್​ ಆಗಿದ್ದು, ಇದು ಅವರ ಕೊನೆಯ ಕಾರ್ಯಕ್ರಮವಾಗಿ ಹೋಯಿತು.
VIDEO: ಬಜರಂಗದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್​ ವಿಧಿವಶ: ಯೂಟ್ಯೂಬ್​ ಚಾನೆಲ್​​ನಲ್ಲಿ ಅಪ್ಲೋಡ್ ಆಗಿದೆ ಲಾಸ್ಟ್​ ವಿಡಿಯೋ…

ಆ 22ರ ಯುವತಿ ಕೆಮ್ಮುತ್ತಲೇ ಇದ್ಳು- ಆಸ್ಪತ್ರೆಗೆ ದಾಖಲಾದರೆ ಕೆಮ್ಮಿನ ಇತಿಹಾಸ ಕೇಳಿ, ಕಾರಣ ನೋಡಿ ಅಲ್ಲಿದ್ದವರಿಗೆಲ್ಲ ಶಾಕ್ !


ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರ ಅಗಲಿಕೆ ನೋವು ತಂದಿದೆ.ಬಜರಂಗದಳದ ಮಾಜಿ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S.Yediyurappa (@BSYBJP)April 25, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − two =
Remember me
