ಬೆಂಗಳೂರು: ಕರೊನಾ ಸಂಕಟದಿಂದ ಪಾರಾಗಲು ಅನೇಕ ಉಪಕ್ರಮಗಳನ್ನು ತೆಗೆದುಕೊಂಡಿರುವ ಸರ್ಕಾರ ಇದೀಗ, ತುರ್ತುಪರಿಹಾರಕ್ಕಾಗಿ ಹಣ ವ್ಯಯಿಸಬೇಕಾಗಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಸ್ವತಃ ಒಂದು ವರ್ಷದ ವೇತನವನ್ನು ಪರಿಹಾರ ನಿಧಿಗೆ ನೀಡುತ್ತಿರುವುದಾಗಿ ಘೋಷಿಸಿದ್ದಾರೆ.
ಅಲ್ಲದೆ, ಈ ಸಂಬಂಧ ವಿಡಿಯೋ ಒಂದನ್ನು ಟ್ವೀಟ್ ಖಾತೆಯಲ್ಲಿ ಅಪ್ಲೋಡ್ ಮಾಡಿರುವ ಮುಖ್ಯಮಂತ್ರಿ ಬಿಎಸ್​ವೈ, ಪರಿಹಾರ ನಿಧಿಗೆ ಒಂದು ವರ್ಷದ ವೇತನವನ್ನು ಸಂಪೂರ್ಣವಾಗಿ ದೇಣಿಗೆ ನೀಡುವುದಾಗಿ ಹೇಳಿದ್ದಾರೆ. ಅಲ್ಲದೆ, ಸಚಿವ ಸಂಪುಟದ ಸಹೋದ್ಯೋಗಿಗಳು, ಅಧಿಕಾರಿಗಳು, ಸಿಬ್ಬಂದಿ ವರ್ಗ ತಮ್ಮ ಕೈಲಾದ ಮಟ್ಟಿಗೆ ಹಣವನ್ನು ದೇಣಿಗೆಯ ರೂಪದಲ್ಲಿ ಪರಿಹಾರ ನಿಧಿಗೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಕರೊನಾ ಸೋಂಕು ಬೇರೆ ಬೇರೆ ರೀತಿಯಲ್ಲಿ ಜನಜೀವನವನ್ನು ತಟ್ಟಿದ್ದು, ಪರಿಹಾರ ಕಾರ್ಯಗಳಲ್ಲಿ ಸಾರ್ವಜನಿಕರೂ ಸಹಾಯ ಹಸ್ತ ಚಾಚಬೇಕು. ಸಾಧ್ಯ ಇರುವಂಥವರು ದೇಣಿಗೆ ನೀಡಬೇಕು ಎಂದೂ ಅವರು ಮನವಿ ಮಾಡಿದ್ದಾರೆ.
ಪ್ರಧಾನಮಂತ್ರಿ ಪರಿಹಾರ ನಿಧಿಗೆ 1.01 ಕೋಟಿ ದೇಣಿಗೆ

#ಕೊರೊನಸೋಂಕು ವಿರುದ್ಧದ ಹೋರಾಟಕ್ಕೆ ನನ್ನ ಒಂದು ವರ್ಷದ ಸಂಬಳವನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19' ಕ್ಕೆ ನೀಡುತ್ತಿದ್ದೇನೆ. ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ತಮ್ಮ ಕೈಲಾದ ಮಟ್ಟಿಗೆ ದೇಣಿಗೆ ನೀಡಿ ಈ ಹೋರಾಟಕ್ಕೆ ಬಲ ತುಂಬಬೇಕು ಎಂದು ಮನವಿ ಮಾಡುತ್ತೇನೆ.@BSYBJP#DonatetoCMRFCovid19pic.twitter.com/GXuzVTuaua
— CM of Karnataka (@CMofKarnataka)April 1, 2020

ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ಕೊಟ್ಟ ಪುನೀತ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
