ಬೆಂಗಳೂರು:ಕರೊನಾ ಬಂದಾಕ್ಷಣ ಯಾರೂ ಸಾಯುವುದಿಲ್ಲ. ಬೇರೆ ಬೇರೆ ಸಮಸ್ಯೆ ಇರುವವರು ಕೆಲವರು ತಡವಾಗಿ ಆಸ್ಪತ್ರೆಗೆ ಬರುವುದರಿಂದ ಮೃತರಾಗುವ ಸಾಧ್ಯತೆ ಹೆಚ್ಚು. ಆದರೆ ಮಾಧ್ಯಮಗಳು ಸಂಯಮದಿಂದ ವರದಿ ಮಾಡಬೇಕು ಎಂದು ತಜ್ಞ ವೈದ್ಯರು ಸಲಹೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಹುತೇಕ ವೈದ್ಯರು, ‘ಸಾಕಷ್ಟು ರೋಗಿಗಳು ಗುಣಮುಖರಾಗುತ್ತಾರೆ, ಅದರ ಬಗ್ಗೆ ಹೆಚ್ಚು ವರದಿ ಮಾಡಿ ಜನರಲ್ಲಿ ಧೈರ್ಯ ಮೂಡಿಸಬೇಕು’ ಎಂದರು.
ಮಣಿಪಾಲ ಆಸ್ಪತ್ರೆ ಸಮೂಹದ ಮುಖ್ಯಸ್ಥ ಡಾ. ಸುದರ್ಶನ ಬಲ್ಲಾಳ್ ಮಾತನಾಡಿ, ‘ರಿಕವರಿ ಪ್ರಮಾಣ ಸಹ ಹೆಚ್ಚಾಗಿದೆ. ಅದರ ಬಗ್ಗೆಯೂ ವರದಿ ಮಾಡಿ. ರೋಗಲಕ್ಷಣ ಇಲ್ಲದವರು ಆಸ್ಪತ್ರೆಗೆ ಬಂದು ಅಡ್ಮಿಟ್ ಆಗಬೇಕಿಲ್ಲ. ಆಗ ಆಸ್ಪತ್ರೆಗಳಲ್ಲಿ ಬೆಡ್​ಗಳ ತೊಂದರೆಯಾಗುವುದಿಲ್ಲ. ಖಾಸಗಿ ಆಸ್ಪತ್ರೆಗಳು ಸರ್ಕಾರದ ಜತೆ ಸೇರಿ ಕೆಲಸ ಮಾಡುತ್ತೇವೆ’ ಎಂದರು.
ಇದನ್ನೂ ಓದಿ:4ರಿಂದ ಕರ್ನಾಟಕ-ಕೇರಳ ಗಡಿ ಬಂದ್: ಕೇರಳ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥ ಡಾ. ಶರಣ ಪ್ರಕಾಶ್ ಪಾಟೀಲ್ ಮಾತನಾಡಿ, ನಮ್ಮ ಆಸ್ಪತ್ರೆಯಲ್ಲಿ ಅನೇಕರು ರಿಕವರಿಯಾಗಿ ಮನೆಗೆ ಹೋಗಿದ್ದಾರೆ. ಇಂತಹ ಸುದ್ದಿಗಳ ಕಡೆ ಹೆಚ್ಚಿನ ಆದ್ಯತೆ ಇರಲಿ. ರೋಗ ಲಕ್ಷಣ ಇಲ್ಲದ ಅನೇಕರು ಆಸ್ಪತ್ರೆಗೆ ಬಂದು ಲ್ಯಾಪ್ ಹಿಡಿದುಕೊಂಡು ಕೂತಿದ್ದಾರೆ. ರೋಗ ಲಕ್ಷಣ ಇಲ್ಲದಿದ್ದರೆ ಆಸ್ಪತ್ರೆಗೆ ಬರುವ ಅಗತ್ಯವೇ ಇಲ್ಲ ಎಂದರು.
ನಾರಾಯಣ ನೇತ್ರಾಲಯದ ಡಾ. ಭುಜಂಗ ಶೆಟ್ಟಿ, ‘ನಾವು ಸಲಹೆಗಳನ್ನು ನೀಡಿದ್ದೇವೆ. ಅವುಗಳನ್ನು ಸರ್ಕಾರ ಜಾರಿ ಮಾಡಬೇಕಷ್ಟೇ’ ಎಂದರು.
21 ಪೊಲೀಸರಿಗೆ ಸೋಂಕು- ಈವರೆಗೆ 168ಕ್ಕೂ ಮಂದಿಗೆ ಕೋವಿಡ್ | ಸಿಐಡಿ ಕಚೇರಿ ಸೀಲ್​ಡೌನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 1 =
Remember me
