ಬೆಂಗಳೂರು:ಮುಖ್ಯಮಂತ್ರಿ ಗೃಹ ಕಚೇರಿ ಹಾಗೂ ಸರ್ಕಾರಿ ನಿವಾಸದ ಸಿಬ್ಬಂದಿಗೆ ಕರೊನಾ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ನವರು ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಕ್ವಾರಂಟೈನ್‌ ಸಮಯದಲ್ಲಿ ಭೇಟಿಯಾಗುವವರು, ಮೀಟಿಂಗ್‌ ಇತ್ಯಾದಿಗಳ ಬಿರುಸಿನ ಚಟುವಟಿಕೆ ಇರದ ಹಿನ್ನೆಲೆಯಲ್ಲಿ ಸಮಯ ಕಳೆಯುವ ಸಲುವಾಗಿ ಮುಖ್ಯಮಂತ್ರಿಗಳು ‘ಯಯಾತಿ’ ಪುಸ್ತಕವನ್ನು ಕೈಗೆತ್ತಿಕೊಂಡಿದ್ದಾರೆ.
ಇಂದು ಬೆಳಗ್ಗೆ ಕರೊನಾ ಸಂಬಂಧಿಸಿದ ಸಭೆ ಮುಗಿದ ಬಳಿಕ ಮರಾಠಿ ಲೇಖಕ ವಿ.ಎಸ್ ಖಾಂಡೇಕರ್ ಅವರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕಾದಂಬರಿ ಯಯಾತಿ ಕನ್ನಡಾನುವಾದ ಪುಸ್ತಕ ಓದಲು ಶುರುಮಾಡಿದ್ದಾರೆ. ಈ ಪುಸ್ತಕವನ್ನು ವಿ.ಎಂ.ಇನಾಂದಾರ್ ಅವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.
ಬಿಡುವಿನ ವೇಳೆಯಲ್ಲಿ ನನಗೆ ಅತ್ಯಂತ ಪ್ರಿಯವಾದ ಕಾಲಕ್ಷೇಪವೆಂದರೆ ಓದುವುದು. ನೂರಾರು ಸಂಗತಿಗಳ ಬಗ್ಗೆ ತಿಳಿದಷ್ಟೂ ತಿಳಿಯಬಹುದಾದ ವಿಷಯಗಳಿವೆ, ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ. ಇಂದಿನ ಭಾನುವಾರದ ಲಾಕ್ ಡೌನ್ ಮತ್ತು ಸ್ವ-ಕ್ವಾರಂಟೈನ್ ನಲ್ಲಿರುವ ವೇಳೆ ಸಿಕ್ಕ ಸ್ವಲ್ಪ ಬಿಡುವಿನ ಸಮಯವನ್ನು ಖಾಂಡೇಕರ್ ಅವರ ಯಯಾತಿಯ ಜೊತೆಗೆ ಕಳೆಯುತ್ತಿದ್ದೇನೆ.pic.twitter.com/F8MmXJvsrN
— B.S.Yediyurappa (@BSYBJP)July 12, 2020

ಪುಸ್ತಕ ಓದುತ್ತಿರುವ ಫೋಟೋವನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, ಬಿಡುವಿನ ವೇಳೆಯಲ್ಲಿ ನನಗೆ ಅತ್ಯಂತ ಪ್ರಿಯವಾದ ಕಾಲಕ್ಷೇಪವೆಂದರೆ ಓದುವುದು. ನೂರಾರು ಸಂಗತಿಗಳ ಬಗ್ಗೆ ತಿಳಿದಷ್ಟೂ ತಿಳಿಯಬಹುದಾದ ವಿಷಯಗಳಿವೆ, ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ. ಇಂದಿನ ಭಾನುವಾರದ ಲಾಕ್ ಡೌನ್ ಮತ್ತು ಸ್ವ-ಕ್ವಾರಂಟೈನ್ ನಲ್ಲಿರುವ ವೇಳೆ ಸಿಕ್ಕ ಸ್ವಲ್ಪ ಬಿಡುವಿನ ಸಮಯವನ್ನು ಖಾಂಡೇಕರ್ ಅವರ ಯಯಾತಿಯ ಜೊತೆಗೆ ಕಳೆಯುತ್ತಿದ್ದೇನೆ” ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಹಾಗೂ ಸರ್ಕಾರಿ ನಿವಾಸ ಕಾವೇರಿಯ ಒಟ್ಟು 10 ಮಂದಿ ಸಿಬ್ಬಂದಿಯಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಸ್ವಯಂ ನಿರ್ಬಂಧಕ್ಕೆ ಯಡಿಯೂರಪ್ಪ ಒಳಗಾಗಿದ್ದಾರೆ.
12 ಜಿಲ್ಲೆಗಳು ಸಂಪೂರ್ಣ ಲಾಕ್‌ಡೌನ್‌? ಸಚಿವ ಅಶೋಕ್‌ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − seventeen =
Remember me
