ಮೈಸೂರು:ಡ್ರಗ್ಸ್​ ದಂಧೆಯಲ್ಲಿ ಸ್ಯಾಂಡಲ್​ವುಡ್​ ನಂಟಿನ ಬಗ್ಗೆಯೇ ರಾಜ್ಯಾದ್ಯಾಂತ ಬಿಸಿಬಿಸಿ ಚರ್ಚೆಯಾಗುತ್ತಿದೆ. ಈ ನಡುವೆ ಡ್ರಗ್ಸ್​ ದಂಧೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಮಾತನಾಡಿದ್ದಾರೆ.
ಡ್ರಗ್ಸ್​ ಕೇಸ್​ನಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಪಟ್ಟಿರುವ ನಟಿ ರಾಗಿಣಿ ದ್ವಿವೇದಿ ಈ ಹಿಂದೆ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಕೆ.ಆರ್​.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಟಿ ರಾಗಿಣಿ ಬಿಜೆಪಿ ಪರ ಕ್ಯಾಂಪೇನ್​ ಮಾಡಿದ್ದು ನಿಜ. ಆದರೆ ಚಿತ್ರ ನಟ-ನಟಿಯರು ಒಂದೇ ಪಕ್ಷದ ಪರ ಪ್ರಚಾರ ಮಾಡಿದ ಉದಾಹರಣೆ ಇಲ್ಲ. ಒಂದೇ ಚುನಾವಣೆಯಲ್ಲಿ ಬೇರೆ ಬೇರೆ ಪಕ್ಷದ ಪರ ಪ್ರಚಾರ ಮಾಡಿದ್ದಾರೆ. ನಟಿ ರಾಗಿಣಿ ಬಿಜೆಪಿ ಸೇರಿಲ್ಲ. ಒಂದು ವೇಳೆ ಬಿಜೆಪಿ ಬೆಂಬಲಿವಿದೆ ಎನ್ನುವುದಿದ್ದರೆ ಅವರು ಅರೆಸ್ಟ್​ ಆಗುತ್ತಿರಲಿಲ್ಲ ಎಂದರು.
ಇದನ್ನೂ ಓದಿರಿvideo/ ನಟಿ ಸಂಜನಾ ಬಂಧನ ಬೆನ್ನಲ್ಲೇ ವಿಡಿಯೋವೊಂದು ವೈರಲ್​
ಡ್ರಗ್ಸ್​ ದಂಧೆ ನಿನ್ನೆ ಮೊನ್ನೆಯದ್ದಲ್ಲ. ನೆರೆ ರಾಷ್ಟ್ರಗಳಿಂದ ಡ್ರಗ್ಸ್​ ಅನ್ನು ಭಾರತಕ್ಕೆ ಸರಬರಾಜು ಮಾಡಿ ಯವಶಕ್ತಿಯನ್ನು ಕುಂದಿಸುವ ಕೆಲಸ ಮಾಡಲಾಗುತ್ತದೆ. ಆದರೆ ಈ ಮಾಫಿಯಾವನ್ನು ಹತ್ತಿಕ್ಕಲು ಹಿಂದಿನ ಯಾವ ಸರ್ಕಾರವೂ ಮುಂದಾಗಿರಲಿಲ್ಲ. ಈಗ ರಾಜ್ಯದ ಪೊಲೀಸ್​ ಅಧಿಕಾರಿಗಳು ಮಾಫಿಯಾ ಹತ್ತಿಕ್ಕಲು ಮುಂದಾಗಿದ್ದಾರೆ. ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಸರ್ಕಾರ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಶ್ರಮಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ, ಯಾವುದೇ ಪ್ರಭಾವಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ. ಈ ಕೇಸ್​ನಲ್ಲಿ ಯಾರೇ ಇದ್ದರೂ ಅವರಿಗೆ ಕ್ಷಮೆ ಇಲ್ಲ ಎಂದು ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು.
ನಟಿ ರಾಗಿಣಿ ಆಪ್ತ ರವಿಶಂಕರ್​ನ ಐಷಾರಾಮಿ ಜೀವನಕ್ಕೆ ಸಿಸಿಬಿ ಪೊಲೀಸರೇ ದಂಗು

ಡ್ರಗ್ಸ್ ಮಾಫಿಯಾ ಕಾರಣಕ್ಕೆ ಬೆಂಗಳೂರು ಕಾಂಗ್ರೆಸ್ ನಾಯಕರಿಗೆ ಶುರುವಾಗಿದೆ ಟೆನ್ಷನ್!

ಮಾಜಿ ಶಾಸಕರೊಬ್ಬರ ಮಗ ಆತ್ಮಹತ್ಯೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:9 + 1 =
Remember me
