ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ದೆಹಲಿ ಭೇಟಿ ಸಫಲವಾಗಿದ್ದು, ಬುಧವಾರ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ವರಿಷ್ಠರು ಅನುಮತಿ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್​ ಷಾರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಹಲವು ದಿನಗಳಿಂದ ಸಚಿವರಾಗಲು ಕಾಯುತ್ತಿದ್ದವರಿಗೆ ಶುಕ್ರದೆಸೆ ಬಂದೊದಗಿದೆ.
ವರಿಷ್ಠರ ಭೇಟಿ ನಂತರ ಬೆಂಗಳೂರಿಗೆ ವಾಪಾಸಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್​.ಯಡಿಯೂರಪ್ಪ, 7 ಜನರು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ 7 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಯಾರೆಲ್ಲ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಪಟ್ಟಿ ನೀಡುತ್ತೇನೆ ಎಂದೂ ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ.ವಿವರಗಳಿಗೆhttps://t.co/YaFZZbZDD9ನೋಡಿpic.twitter.com/J8F6npHNYk
— Vijayavani (@VVani4U)January 10, 2021

ಮಧ್ಯರಾತ್ರಿಯಲ್ಲಿ ನೀರು ಕುಡಿಯಲೆದ್ದಿದ್ದ ಅಮ್ಮನಿಗಾಯ್ತು ದಿಗಿಲು​; ರಾತ್ರಿ ಮಲಗಿದ್ದ ಮಗ-ಸೊಸೆ ಅಲ್ಲಿರಲಿಲ್ಲ..!

ನೆನಪಿರಲಿ, ಹುಡುಗರೂ ಸೇಫ್​ ಅಲ್ಲ… ಕೆಲಸದ ಆಮಿಷ ಒಡ್ಡಿ ಯುವಕನ ಮೇಲೆ ಗ್ಯಾಂಗ್​ರೇಪ್​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 − one =
Remember me
