ಬೆಂಗಳೂರು:ಕರೊನಾ ಸೋಂಕು ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಿ, ವಸ್ತುಸ್ಥಿತಿ ಪರಿಶೀಲನೆ ಜೊತೆಗೆ ಅಭಿವೃದ್ಧಿ ಕಾರ್ಯಗಳ ಪರಾಮರ್ಶೆ ಮಾಡುವ ಅಜೆಂಡಾದೊಂದಿಗೆ ಜಿಲ್ಲಾ ಪ್ರವಾಸ ಆರಂಭಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಮೂರನೇ ಹಂತದ ಪ್ರವಾಸ ನಿಗದಿ ಮಾಡಿದ್ದಾರೆ.
ಜೂ.11 ರಂದು ಹಾಸನ ಜಿಲ್ಲೆಗೆ ತೆರಳಲಿರುವ ಸಿಎಂ ಬಿಎಸ್​​​ವೈ, ಕೋವಿಡ್ ಪರಿಸ್ಥಿತಿ ಮತ್ತು ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲಿಸಲಿದ್ದಾರೆ. ನಂತರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ.
ಇದನ್ನೂ ಓದಿ:ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಜೂ.12 ರಂದು‌ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ‌ ನಡೆಸಿ, ಕರೊನಾ ಸ್ಥಿತಿಗತಿ, ಅಭಿವೃದ್ಧಿ ಕಾರ್ಯಗಳನ್ನು ಪರಾಮರ್ಶಿಸಲಿದ್ದು ಶಿಕಾರಿಪುರದಲ್ಲಿ ತಂಗುವರು. ಜೂ.13 ರ ಬೆಳಿಗ್ಗೆ 11 ಕ್ಕೆ ಅಲ್ಲಿಂದ ಹೆಲಿಕಾಪ್ಟರ್​​ನಲ್ಲಿ ಬೆಂಗಳೂರಿಗೆ ಮರುಪ್ರಯಾಣ ಬೆಳೆಸುವರು.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ

ಅನ್​​ಲಾಕ್​ ಬಸ್​ ಸಂಚಾರಕ್ಕೆ ಸಿದ್ಧತೆ : ಸಾರಿಗೆ ನೌಕರರಿಗೆ ಕರ್ತವ್ಯದ ಕರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 15 =
Remember me
