ಬೆಂಗಳೂರು:ರಾಜ್ಯ ರಾಜಧಾನಿಯಲ್ಲಿ ಶುಕ್ರವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಕ್ಷರಶಃ ತತ್ತರಿಸಿದ್ದು, ಮಳೆ ಹಾನಿ ವೀಕ್ಷಿಸಲು ಖುದ್ದು ಸಿಎಂ ಬಿ.ಎಸ್​.ಯಡಿಯೂರಪ್ಪ ಶನಿವಾರ ಮಧ್ಯಾಹ್ನ ನಗರ ಪ್ರವಾಸ ಕೈಗೊಂಡಿದ್ದಾರೆ.
ಹೊಸಕೆರೆಹಳ್ಳಿ, ದತ್ತಾತ್ರೇಯ ಬಡಾವಣೆ ಸೇರಿದಂತೆ ಹಲವು ಪ್ರದೇಶಗಳಿಗೆ ಸಿಎಂ ಭೇಟಿ ನೀಡಲಿದ್ದು, ಆರ್.ಅಶೋಕ್ ಮತ್ತು ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಶನಿವಾರ ಮತ್ತು ಭಾನುವಾರವೂ ಭಾರಿ ಮಳೆ ಆಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಈಗಾಗಲೇ ಸಿಎಂ ಸೂಚನೆ ನೀಡಿದ್ದಾರೆ.
ಶುಕ್ರವಾರ ಸುರಿದ ಮಳೆಗೆ ಹಲವು ಪ್ರದೇಶ ಜಲಾವೃತವಾಗಿದ್ದು, ಕಾರು-ಬಸ್​ಗಳೂ ಕೊಚ್ಚಿಹೋದವು. ಸಾವಿರಾರು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈಗಾಗಲೇ ಸಚಿವರು, ಶಾಸಕರು, ಅಧಿಕಾರಿಗಳ ತುರ್ತುಸಭೆಯನ್ನು ಸಿಎಂ ನಡೆಸಿದ್ದಾರೆ. ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ಮಾಡಿ ಪರಿಸ್ಥಿತಿ ಅವಲೋಕಿಸಲು ಸ್ವತಃ ಅವರೇ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − twelve =
Remember me
