ಬೆಂಗಳೂರು:ಕೇಂದ್ರ ಸರ್ಕಾರದ ತಂಡ ಭೇಟಿ ನೀಡಿದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬುಧವಾರ ಮಹತ್ವದ ಸಭೆ ನಡೆಸಿದೆ. ಕೋವಿಡ್ ನಿರ್ವಹಣೆಯ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ರಾಜ್ಯದ ಅಧಿಕಾರಿಗಳಿಗೆ ಎರಡು ದಿನದ ಗಡುವು ನೀಡಿರುವ ಸಿಎಂ, ಅಧಿಕಾರಿಗಳಿಂದ ಹಿಡಿದು, ಸಚಿವರ ತನಕ ಪರಸ್ಪರ ಹೊಂದಾಣಿಕೆಯಿಂದ ಯುದ್ದೋಪಾದಿಯಲ್ಲಿ ಕೆಲಸ ಮಾಡಲು ಮುಂದಾಗಬೇಕು ಎಂದು ಕಟ್ಟಾಜ್ಞೆ ವಿಧಿಸಿದ್ದಾರೆ.
ಅಷ್ಟೇ ಅಲ್ಲ, ಯಡಿಯೂರಪ್ಪ ಅವರೇ ಖುದ್ದು ಕೋವಿಡ್ ಕೇರ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ಆರೋಗ್ಯ ಸಚಿವ, ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಅಧಿಕಾರಿಗಳ ಜತೆಗೆ ಸಭೆಯಲ್ಲಿ ಗಂಭೀರವಾಗಿ ಚರ್ಚೆ ನಡೆಸಿದ ಸಿಎಂ, ಕಂಟೇನ್‌ಮೆಂಟ್ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಸೂಚಿಸಿದ್ದಾರೆ.ಇದನ್ನೂ ಓದಿ:ಆನ್​ಲೈನ್ ಪ್ರೇಮಿ ತೋಡಿದ ಹಳ್ಳಕ್ಕೆ ಬಿದ್ದು 34 ಲಕ್ಷ ರೂ. ಕಳೆದುಕೊಂಡಳು…
ಸೋಂಕಿತರ ಆರೋಗ್ಯ ತಪಾಸಣೆಗೆ ಹೆಚ್ಚಿನ ನಿಗಾ ವಹಿಸುವುದು, ಲ್ಯಾಬ್‌ಗಳ ನಿರ್ವಹಣೆ ಮತ್ತು ಕೇಂದ್ರದ ಕೇರ್ ಸೆಂಟರ್ ನಡುವೆ ಸಮನ್ವಯತೆಗೆ ಡ್ಯಾಶ್ ಬೋರ್ಡ್ ಬಳಸುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ. ಸಿಎಂ ಜತೆಗಿನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ರೋಗಿಗಳಿಗೆ ಕಲ್ಪಿಸಿರುವ ವ್ಯವಸ್ಥೆ ಬಗ್ಗೆ ಸಿಎಂ ಗುರುವಾರ ಖುದ್ದು ಪರಿಶೀಲನೆ ಮಾಡಲಿದ್ದಾರೆ ಎಂದು ಖಚಿತಪಡಿಸಿದರು.
ಕೋವಿಡ್ ಕೇರ್ ಸೆಂಟ್ರಲ್ ನಲ್ಲಿ ಯಾವ್ಲೆ ವ್ಯವಸ್ಥೆ ಆಗಿದೆ. ಬಿಇಸಿಯಲ್ಲಿ ಹಾಸಿಗೆ ವ್ಯವಸ್ಥೆ ಹೇಗಿದೆ? ಎಂಬ ಬಗ್ಗೆ ಸಭೆಯಲ್ಲಿ ಸಿಎಂ ಮಾಹಿತಿ ಪಡೆದರು. ಕೋವಿಡ್ ಕೇರ್ ಸೆಂಟರ್‌ಗೆ ಆಂಬ್ಯುಲೆನ್ಸ್ ನಲ್ಲಿಯೇ ಹೋಗಬೇಕೆಂದ್ಲಿ. ಕೆಲವರನ್ನು ಟಿಟಿಯಲ್ಲಿ ಕರೆದುಕೊಂಡು ಹೋಗ್ತಾರೆ. ರೋಗ ಲಕ್ಷಣಗಳು ಇ್ಲದವರಿಗೆ ಅಂಬ್ಯುಲೆನ್ಸ್‌ನ ಅವಶ್ಯಕತೆ ಇ್ಲ ಎಂದು ಸುಧಾಕರ್ ಹೇಳಿದರು.
ಶಾಸಕ ಶರತ್ ಬಚ್ಚೇಗೌಡ ದಂಪತಿಗೆ ಕರೊನಾ ಸೋಂಕು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 19 =
Remember me
