ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬದಲಾಗುತ್ತಾರೆ ಎಂಬ ಚರ್ಚೆಗಳು ಅಪ್ರಸ್ತುತ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿಎಂ ಬದಲಾಗುತ್ತಾರೆ ಎಂದು ಕಾಂಗ್ರೆಸ್‌ನ ಯಾವ ನಾಯಕರೂ ಹೇಳಿಲ್ಲ. ಬಿಜೆಪಿ-ಜೆಡಿಎಸ್‌ನ ನಾಯಕರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆ ರೀತಿಯ ಚರ್ಚೆಗಳೇ ಅನಗತ್ಯ ಎಂದು ಹೇಳಿದರು.
ಮುಂದಿನ ಮೂರು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ. ಅವರು ಬದಲಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದರು.ಮುಖ್ಯಮಂತ್ರಿಯವರ ವಿರುದ್ಧ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಬಾರದು. ಈ ಕುರಿತು ದಾಖಲಾಗಿರುವ ದೂರನ್ನು ತಿರಸ್ಕರಿಸಬೇಕು ಮತ್ತು ಶೋಕಾಸ್ ನೋಟೀಸ್ ಅನ್ನು ವಾಪಸ್ ಪಡೆಯಬೇಕು ಎಂದು ಸಚಿವ ಸಂಪುಟ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಸಲಹೆ ನೀಡಿದೆ.
ಅದರ ಹೊರತಾಗಿಯೂ ಅವರು ಮುಂದುವರೆದರೆ ನಮಗೆ ಕಾನೂನು ಹೋರಾಟ ಅನಿವಾರ್ಯವಾಗಲಿದೆ. ಆದರೆ ರಾಜ್ಯಪಾಲರು ಕಾನೂನು ಬಿಟ್ಟು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅನಿಸುವುದಿಲ್ಲ. ಕಾನೂನಿನ ಪ್ರಕಾರ ನಡೆದುಕೊಳ್ಳುವ ನಿರೀಕ್ಷೆಯಿದೆ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಫೋಕ್ಸೊ ಪ್ರಕರಣಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವು ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಮೇಲ್ಮನವಿ ಸಲ್ಲಿಸಲಾಗಿದೆ. ಮುಂದಿನ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಸಮರ್ಥ ವಾದ ಮಂಡಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿರು.
ಫೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳಿಗೆ ಸಾಮಾನ್ಯವಾಗಿ ಜಾಮೀನು ದೊರೆಯುವುದಿಲ್ಲ. ಆದರೆ ನ್ಯಾಯಾಧೀಶರು ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ಪರವಕೀಲರು ನ್ಯಾಯಾಲಯದ ಮುಂದೆ ಸತ್ಯಾಸತ್ಯತೆಗಳನ್ನು ವಿವರಿಸಲಿದ್ದಾರೆ. ತಡೆಯಾಜ್ಞೆ ತೆರವುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಕೆನೆಪದರ ಮೀರಿದವರನ್ನು ಮೀಸಲಾತಿಯಿಂದ ಹೊರಗಿಡುವಂತಹ ನಿರ್ಣಯ ಮಾಡುವಂತೆ ಬಿಜೆಪಿ ಸಂಸದರ ನಿಯೋಗ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನ್ನ ಅಭಿಪ್ರಾಯಗಳು ಏನೇ ಇದ್ದರೂ ಅದು ವೈಯಕ್ತಿಕ. ಎಐಸಿಸಿ ಚರ್ಚೆ ಮಾಡಿ ತೆಗೆದುಕೊಳ್ಳುವ ನಿರ್ಧಾರದಂತೆ ನಾವು ನಡೆಯುತ್ತೇವೆ ಎಂದು ಡಾ.ಪರಮೇಶ್ವರ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
