ದಾವಣಗೆರೆ:ರಾಜ್ಯದಲ್ಲಿ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆ ವಿಚಾರ ಆಗಾಗ ಚರ್ಚೆಗೆ ಬರುತ್ತಿದ್ದು, ಅದೀಗ ಇನ್ನೊಮ್ಮೆ ಮುನ್ನೆಲೆಗೆ ಬಂದಿದೆ. ಚುನಾವಣೆ ಹತ್ತಿರ ಇರುವ ಈ ಸಮಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ಆಗುತ್ತಿದ್ದು, ಆ ಸಂಬಂಧ ಸಿಎಂ ರಾಜಕೀಯ ಕಾರ್ಯದರ್ಶಿ ಪ್ರತಿಕ್ರಿಯಿಸಿದ್ದಾರೆ.
ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ದಾವಣಗೆರೆಯ ಹೊನ್ನಾಳಿಯಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ ಗುಂಪು, ಡಿ.ಕೆ.ಶಿವಕುಮಾರ್ ಗುಂಪು, ಖರ್ಗೆ ಗುಂಪುಗಳಾಗಿದ್ದು, ಅವರು ತಮ್ಮಲ್ಲಿನ ಭಿನ್ನಾಭಿಪ್ರಾಯ ಮುಚ್ಚಿಟ್ಟುಕೊಳ್ಳಲು ಬಿಜೆಪಿ ವಿರುದ್ಧ ಮಾತನಾಡುತ್ತಾರೆ. ಅವರು ಮೊದಲು ತಮ್ಮಲ್ಲಿನ ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳಲಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಕಾಂಗ್ರೆಸ್​ನವರು ಭ್ರಮಾಲೋಕದಲ್ಲಿದ್ದಾರೆ ಎಂದು ಹೇಳಿರುವ ರೇಣುಕಾಚಾರ್ಯ, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳ ಬದಲಾವಣೆ ಹೇಳಿಕೆ ಊಹಾಪೋಹವಷ್ಟೇ. ಮುಂದಿನ ಅವಧಿಗೂ ಬಸವರಾಜ್ ಬೊಮ್ಮಾಯಿಯವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂಬುದಾಗಿ ರೇಣುಕಾಚಾರ್ಯ ಹೇಳಿದ್ದಾರೆ.
ಶಾಲೆಯಿಂದ ಹೊರಟ 2ನೇ ತರಗತಿ ವಿದ್ಯಾರ್ಥಿನಿ ಮನೆಗೆ ತಲುಪಲೇ ಇಲ್ಲ; ಕಾಲುಸಂಕಕ್ಕೆ ಪ್ರಾಣವೇ ಸುಂಕ!?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
