ಬೆಂಗಳೂರು:ಹಿಂದಿನ ಸರ್ಕಾರವನ್ನು ಹಣಿಯಲು ಪ್ರತಿಪಕ್ಷ ಬಳಸಿಕೊಂಡ ಗುತ್ತಿಗೆದಾರರ ಕಮೀಷನ್ ಆರೋಪ ಹೊಸ ಸರ್ಕಾರವನ್ನೂ ಸಹ ಬಿಟ್ಟು ಬಿಡದೇ ಕಾಡುತ್ತಿದೆ.
ಡಿಸಿಎಂ ವಿರುದ್ಧವೇ ಗುತ್ತಿಗೆದಾರರು ಶೇ.ಹದಿನೈದು ಕಮೀಷನ್ ಬೇಡಿಕೆ ಆರೋಪ ಮಾಡಿದ್ದು ರಾಜಕೀಯ ವಲಯದಲ್ಲಿ ಸಂಚಲನ‌ ಮೂಡಿಸಿದೆ.ಇದೀಗ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
“ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ ಶೇ.15 ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು ಕಮೀಷನ್ ಶೇ.40ರಿಂದ ಶೇ.15ಕ್ಕೆ ಇಳಿಸಿರುವುದು ಸಂತೋಷದ ವಿಷಯ”ಎಂದು ಹೇಳಿದ್ದಾರೆ.ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯ ಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, ನರೇಂದ್ರ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ ಎಂದು ಕುಟುಕಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 − 7 =
Remember me
