ಬೆಂಗಳೂರು:ವಿಪಕ್ಷ ನಾಯಕರಾದ ಆರ್​. ಅಶೋಕ್​ ಅವರೇ ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ, ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ ಎಸ್​ಐಟಿ ರಚಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಿಮಗೆ ಮಾಹಿತಿ ಇಲ್ಲವೇ? ನಿಮ್ಮ ಪಕ್ಷಕ್ಕೆ ಏನಾದರೂ ಹೇಳುವುದಿದ್ದರೆ, ಇಲ್ಲ ಕೇಳುವುದಿದ್ದರೆ ಹೋಗಿ ಎಸ್​ಐಟಿ ತನಿಖಾ ಸಂಸ್ಥೆ ಮುಂದೆ ಕೇಳಿ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ಇದನ್ನೂ ಓದಿ:ಭಾರತಕ್ಕೆ ಶೇಖ್ ಹಸೀನಾ.. ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ! ಸೇನೆ ಹಿಡಿತಕ್ಕೆ ದೇಶ!!
“ಇದನ್ನು ಬಿಟ್ಟು ಹಾದಿಬೀದಿಯಲ್ಲಿ ಮಾತನಾಡುವವರಂತೆ, ತಾವೇ ಕತೆ ಕಟ್ಟಿಕೊಂಡು ತಲೆಬುಡ ಇಲ್ಲದ ಅರ್ಥಹೀನ ಪ್ರಶ್ನೆಗಳನ್ನು ನನಗೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ. ನಮಗೆ ಪ್ರಶ್ನೆ ಕೇಳುವ ಮೊದಲು ನಿಮ್ಮದೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾ‍ಳ್ ಅವರು ನಿರಂತರವಾಗಿ ಪಕ್ಷದ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ವಿರುದ್ಧ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ಧೈರ್ಯ ತೋರಿಸಿ” ಎಂದು ಲೇವಡಿ ಮಾಡಿದ್ದಾರೆ.
“ಭ್ರಷ್ಟಾಚಾರ, ವಿದ್ರೋಹ ಮತ್ತು ಸ್ವಜನಪಕ್ಷಪಾತವೂ ಸೇರಿದಂತೆ ಯತ್ನಾಳ್ ಮಾಡುತ್ತಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ. ಇಂತಹ ಆರೋಪಗಳನ್ನು ಮಾಡಿದ ನಂತರವೂ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ಕ್ರಮಕೈಗೊಳ್ಳದಿರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶ ಇರುವುದನ್ನು ಪಕ್ಷದ ಹೈಕಮಾಂಡ್ ಕೂಡಾ ಒಪ್ಪಿಕೊಂಡಂತೆ ಕಾಣುತ್ತಿದೆ” ಎಂದು ಹೇಳಿದ್ದಾರೆ.
ಇಂಗ್ಲೆಂಡ್​ ಕ್ರಿಕೆಟ್ ದಿಗ್ಗಜ ಗ್ರಹಾಂ ಥೋರ್ಪ್ ನಿಧನ! ಅಧಿಕೃತ ಮಾಹಿತಿ ಹಂಚಿಕೊಂಡ ಇಸಿಬಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − four =
Remember me
