ಬೆಂಗಳೂರು:”ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ” ಎಂಬಂತೆ ಸಿಎಂ ಸಿದ್ದರಾಮಯ್ಯನವರು ಅಪರೂಪಕ್ಕೆ ಒಮ್ಮೊಮ್ಮೆ ತಮ್ಮ ಪ್ರಗಾಢ ನಿದ್ದೆಯಿಂದ ಎದ್ದು ತಮ್ಮ ಅಹಂಕಾರ, ದರ್ಪ ಪ್ರದರ್ಶನ ಮಾಡುತ್ತಿರುತ್ತಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಚಾಟಿ ಬೀಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳು ಕೈಹಿಡಿದಿಲ್ಲ ಎಂಬ ಆರ್.ಅಶೋಕ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿ, ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. ಆರ್.ಅಶೋಕ್ ಕೂಡ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.
ಗ್ಯಾರಂಟಿಗಳು ಸೋತಿದೆ, ಗ್ಯಾರಂಟಿಗಳು ನಮಗೆ ಮತ ತಂದು ಕೊಟ್ಟಿಲ್ಲ, ಗ್ಯಾರಂಟಿಗಳ ಬಗ್ಗೆ ಪರಾಮರ್ಶೆ ಮಾಡಬೇಕು ಎಂದು ಹೇಳುತ್ತಿರುವುದು ನಾನಲ್ಲ ಸಿದ್ದರಾಮಯ್ಯನವರೇ, ನಿಮ್ಮ ಸಚಿವರುಗಳು, ಶಾಸಕರುಗಳೇ ಗ್ಯಾರಂಟಿಗಳ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ.
ಇಡೀ ದೇಶದಲ್ಲಿ 40 ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸುಳ್ಳು, ಅಪಪ್ರಚಾರ ಮಾಡಿದರೂ ಬಿಜೆಪಿ ತನ್ನ ಸ್ವಂತ ಬಲದ ಮೇಲೆ ಪಡೆದಷ್ಟು ಸೀಟುಗಳನ್ನೂ ಐಎನ್ ಡಿಐಎ ಮೈತ್ರಿಕೂಟ ಪಡೆಯಲಾಗಲಿಲ್ಲ. ರಾಹುಲ್ ಗಾಂಧಿ ಅವರನ್ನು ಎಷ್ಟು ಬಾರಿ ರೀಲಾಂಚ್ ಮಾಡಿದರೂ ಕಾಂಗ್ರೆಸ್ ತಕ್ಕಡಿ ಎರಡಂಕಿ ದಾಟಲಿಲ್ಲ. ಈಗ ಹೇಳಿ ಸೋತಿದ್ದು ಯಾರು ಗೆದಿದ್ದು ಯಾರು?
ಇನ್ನು ರಾಜ್ಯದ ವಿಚಾರಕ್ಕೆ ಬರೋಣ. ರಾಜ್ಯದ 154 ವಿಧಾನಸಭಾ ಕ್ಷೇತ್ರಗಳಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಮುನ್ನಡೆ ಸಿಕ್ಕಿದೆ. 17 ಸಂಪುಟ ಸಚಿವರ ತಮ್ಮ ಸ್ವಂತ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲೀಡ್ ಕೊಡಿಸಲು ವಿಫಲರಾಗಿದ್ದಾರೆ. ಸಚಿವರ ಮಕ್ಕಳು, ತಮ್ಮಂದಿರು, ಕುಟುಂಬ ಸದಸ್ಯರು ಸೋತಿದ್ದಾರೆ. ಈಗ ಹೇಳಿ ಸೋತಿದ್ದು ಯಾರು, ಗೆದ್ದಿದ್ದು ಯಾರು?
ಕಾಂಗ್ರೆಸ್ ಪಕ್ಷ ಗೆದ್ದರೆ ಇವಿಎಂ ಸರಿಯಿದೆ. ಕಾಂಗ್ರೆಸ್ ಪಕ್ಷ ಸೋತರೆ ಇವಿಎಂ ಸರಿಯಿಲ್ಲ. ಇದು ನಿಮ್ಮ ಕಾಂಗ್ರೆಸ್ ಪಕ್ಷದ ಗೋಸುಂಬೆ ರಾಜಕಾರಣ. ಶತಾಯ ಗತಾಯ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ನೀವು ನೀಡಿದ ಸುಳ್ಳು ಭರವಸೆಗಳಿಂದ ದೇಶಾದ್ಯಂತ ಹೆಣ್ಣುಮಕ್ಕಳ ನಿಮ್ಮ ಪಕ್ಷಕ್ಕೆ ಹೇಗೆ ಶಾಪ ಹಾಕುತ್ತಿದ್ದಾರೆ ಎಂದು ಇಡೀ ದೇಶವೇ ನೋಡುತ್ತಿದೆ.
ಕಾಂಗ್ರೆಸ್ ಪಕ್ಷ ಚುನಾವಣೆಗೆ ಹೋಗಿದ್ದು ಮೋದಿ ಅವರನ್ನು ಸೋಲಿಸಲು. ಎನ್ ಡಿಎ ಚುನಾವಣೆಗೆ ಹೋಗಿದ್ದು ದೇಶವನ್ನ ಗೆಲ್ಲಿಸಲು. ಆದ್ದರಿಂದ ದೇಶ ಗೆದ್ದಿದೆ, ಐಎನ್ ಡಿಐಎ ಸೋತಿದೆ.
ಗ್ಯಾರಂಟಿಗಳ ಬಗ್ಗೆ ಬೇಸರ, ಸಿಟ್ಟು, ಅನುಮಾನ ಇವೆಲ್ಲಾ ಇರುವುದು, ನಿಮ್ಮ ಸಚಿವರು ಮತ್ತು ನಿಮ್ಮ ಪಕ್ಷದ ಶಾಸಕರಿಗೆ ಹೊರತು ನಮಗಲ್ಲವೆಂದು ಆರ್.ಅಶೋಕ್ ಎದಿರೇಟು ಕೊಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
