ಬೆಂಗಳೂರು:ಸದ್ಯ ವಿದೇಶಕ್ಕೆ ಹಾರಿರುವ ಹಾಲಿ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ರಾಸಲೀಲೆ ಪ್ರಕರಣದ ವಿಡಿಯೋಗಳು ವ್ಯಾಪಕವಾಗಿ ವೈರಲ್ ಆದ ಬೆನ್ನಲ್ಲೇ ಇದು ಆ ಪಕ್ಷದ ನಾಯಕರು ಹರಿಬಿಟ್ಟಿದ್ದು, ಈ ಪಕ್ಷದವರಿಂದಲೇ ಹೊರಬಂದಿದ್ದು ಎಂಬ ಆರೋಪಗಳು ಕೇಳಿಬರುತ್ತಿವೆ. ಇನ್ನು ನಿನ್ನೆಯಷ್ಟೇ ಬಿಜೆಪಿ ಮುಖಂಡ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿ, ಪೆನ್‌ಡ್ರೈವ್ ಹಗರಣದ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್​ ಕೈವಾಡವಿದೆ ಎಂದು ಆರೋಪಿಸಿದ್ದರು.
ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ಮಾತ್ರವಲ್ಲ! ಈ ಹೆಸರಾಂತ ನಾಯಕರು ಕೂಡ ಹಿಂದೊಮ್ಮೆ ಇದೇ ಪ್ರಕರಣದಡಿ ಸಿಲುಕಿದ್ರು
ಈ ಆರೋಪ ವ್ಯಕ್ತವಾಗುತ್ತಿದ್ದಂತೆ ರಾತ್ರೋ ರಾತ್ರಿ ಬೆಂಗಳೂರಿನ ಬೀದಿ ಬೀದಿಗಳಲ್ಲಿ ಡಿಕೆ ಶಿವಕುಮಾರ್​ ಮತ್ತು ಸಿದ್ದರಾಮಯ್ಯ ಅವರನ್ನು ಒಳಗೊಂಡ ಬಿತ್ತಿಪತ್ರಗಳು ಪತ್ತೆಯಾಗಿವೆ. ನಗರದ ಪ್ರಮುಖ ಸ್ಥಳಗಳಲ್ಲಿ ಈ ಫೋಟೋಗಳು ಕಂಡುಬಂದಿದ್ದು, ಅಪರಿಚಿತರು ಉದ್ದೇಶಪೂರ್ವಕವಾಗಿ ಇಂತಹ ಕೆಲಸಕ್ಕೆ ಕೈಹಾಕಿದ್ದಾರೆ ಎಂಬುದು ತಿಳಿದುಬಂದಿದೆ. ಸದ್ಯ ಅಸಭ್ಯ ಹೇಳಿಕೆಯ ಪೋಸ್ಟರ್​ಗಳು ದಿಢೀರ್​ ಪ್ರತ್ಯಕ್ಷವಾಗಿದ್ದು, ಈ ಕುರಿತು ದೂರು ದಾಖಲಾಗುವ ನಿರೀಕ್ಷೆಯಿದೆ.
ಇನ್ನು ಡಿಕೆ ಶಿವಕುಮಾರ್​ ವಿರುದ್ಧ ದೇವರಾಜೇಗೌಡರು ಮಾಡಿದ ಆರೋಪ ಮತ್ತು ಆಡಿಯೋ ರೆಕಾರ್ಡ್​ ಬಿಡುಗಡೆಗೊಳಿಸಿದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಡಿಸಿಎಂ, “ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆರೋಪಗಳು ಅಪ್ಪಟ ಸುಳ್ಳು. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಕೈವಾಡವಿದೆ” ಎಂದು ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಮಾತ್ರವಲ್ಲ! ಈ ಹೆಸರಾಂತ ನಾಯಕರು ಕೂಡ ಹಿಂದೊಮ್ಮೆ ಇದೇ ಪ್ರಕರಣದಡಿ ಸಿಲುಕಿದ್ರು

ಈತ ಕ್ರೀಸ್​ಗೆ ಬಂದ್ರೆ ಬೌಲರ್​ಗಳೇ ಬೆವರುತ್ತಾರೆ! ಅಜಯ್​ ಜಡೇಜಾ ಹೆಸರಿಸಿದ ಸ್ಟಾರ್​ ಬ್ಯಾಟ್ಸ್​ಮನ್ ಇವರೇ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − 5 =
Remember me
