
ಬೆಂಗಳೂರು:ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ, ಡಿಸಿಎಂ ಮತ್ತು ನಿಗಮದ ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಜೂ.28 ರಂದು ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ತಿಳಿಸಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕೇವಲ ಸಚಿವ ನಾಗೇಂದ್ರರ ರಾಜೀನಾಮೆ ನೀಡಿದ್ದು ಪರಿಹಾರವಲ್ಲ. ಸಚಿವ ಶರಣಪ್ರಕಾಶ ಪಾಟೀಲ್ ಅವರು ರಾಜೀನಾಮೆ ಕೊಡಬೇಕು ಎಂದರು.ಇದ್ದ ಮೂವರಲ್ಲಿ ಕದ್ದವರು ಯಾರು ಎಂಬಂತಾಗಿದೆ ಪರಿಸ್ಥಿತಿ. ಒಬ್ಬರ ಮೇಲೆ ಇನ್ನೊಬ್ಬರು ಬೆಟ್ಟು ತೋರಿಸುತ್ತಿದ್ದಾರೆ. ಪರಿಶಿಷ್ಟ ಪಂಗಡಗಳ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಮೊತ್ತದ ಬೃಹತ್ ಹಗರಣದಲ್ಲಿ ಭಾಗಿಯಾದ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಈಗಾಗಲೇ ಎಸ್‌ಟಿ ಮೋರ್ಚಾ ರಾಜ್ಯಾದ್ಯಂತ ಹೋರಾಟ ಮಾಡುತ್ತಿದೆ ಎಂದರು89 ಕೋಟಿ ಹಣವನ್ನು ಬಳಸಿಕೊಂಡಿದೆ. 700ಕ್ಕೂ ಅಧಿಕ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಮೂಲಕ ಹಣ ದುರ್ಬಳಕೆ ಆಗಿದೆ. ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ದಾವಣಗೆರೆ, ತೆಲಂಗಾಣದ ಹೈದರಾಬಾದ್‌ಗಳಲ್ಲಿ ಖಾತೆ ತೆರೆಯಲಾಗಿತ್ತು ಎಂದು ತಿಳಿಸಿದರು.ಕೂಲಿ ಕಾರ್ಮಿಕರು, ದನ, ಎಮ್ಮೆ ಕಾಯುವ ಅಮಾಯಕ ವ್ಯಕ್ತಿಗಳಿಗೆ 2 ಲಕ್ಷದಿಂದ 5 ಲಕ್ಷದವರೆಗೆ ಹಣ ಹಾಕಿ ವಿತ್ ಡ್ರಾ ಮಾಡಿ ಲೋಕಸಭಾ ಚುನಾವಣೆಗೆ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಕ್ಕೆ ಬಳಸಿಕೊಂಡಿದೆ ಎಂದರು.ಬೇರೊಂದು ಬ್ಯಾಂಕಿನಲ್ಲಿ ಖಾತೆ ತೆರೆದಾಗ ಆರ್ಥಿಕ ಇಲಾಖೆ ಗಮನಕ್ಕೆ ಯಾಕೆ ಬರಲಿಲ್ಲ? ಸ್ವತಃ ಹಣಕಾಸು ಇಲಾಖೆ ಜವಾಬ್ದಾರಿ ನಿರ್ವಹಿಸುವ ಸಿಎಂ ಇದಕ್ಕೆ ಹೊಣೆಗಾರರಲ್ಲವೇ? ಆ ಹಣವನ್ನು ಮರುವರ್ಗಾವಣೆ ಮಾಡಿಸಿದ ವ್ಯಕ್ತಿಗಳು ಯಾರ್ಯಾರು? ಯಾಕೆ ಅವರನ್ನು ಬಂಧಿಸಿಲ್ಲ? ಅವರನ್ನು ಯಾಕೆ ತನಿಖೆಗೆ ಒಳಪಡಿಸಿಲ್ಲ ಎಂದು ಕೇಳಿದರು.ಕೇಂದ್ರ ಸರಕಾರವು ವಿಶೇಷ ದುರ್ಬಲ ಬುಡಕಟ್ಟು ಗುಂಪುಗಳಿಗೆ ಬಿಡುಗಡೆ ಮಾಡಿದ 83 ಕೋಟಿ ಮೊತ್ತವನ್ನು ಕಲ್ಲೇಶ್ ಎಂಬ ಅಧಿಕಾರಿ ಮತ್ತು ಅವರ ತಂಡ ದುರುಪಯೋಗ- ದುರ್ಬಳಕೆ ಮಾಡಿಕೊಂಡಿದೆ. ಇದು ಮುಖ್ಯಮಂತ್ರಿಗಳ ಗಮನಕ್ಕೂ ಬಂದಿದೆ. ಬಳಿಕ ಅಮಾನತು ಮಾಡಲಾಗಿದೆ. ಆದ್ದರಿಂದ ಕಲ್ಲೇಶ್ ಬಂಧಿಸಿ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸಿದರು.ರಾಜ್ಯ ಬಿಜೆಪಿಯ ನಿಕಟಪೂರ್ವ ಕಾರ್ಯದರ್ಶಿ ಜಗದೀಶ ಹಿರೇಮನಿ ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
