ಮೈಸೂರು:ಈ ಪ್ರಾಸಿಕ್ಯೂಷನ್ ಮೂಲಕ ಹೊಂದಾಣಿಕೆ ರಾಜಕಾರಣ ನಿಂತು. ಸ್ವಚ್ಛ ರಾಜಕಾರಣ ಮಾಡಲು ವೇದಿಕೆ ಸಿದ್ಧವಾಗಲಿ. ಕಾಂಗ್ರೆಸ್ ಕೂಡ ಬಿಜೆಪಿ ವಿರುದ್ಧ ಎಲ್ಲಾ ಹಗರಣಗಳ ಆರೋಪಗಳ ತನಿಖೆಗೆ ಆದೇಶ ಮಾಡಲಿ. ಈ ಮೂಲಕ ಹೊಂದಾಣಿಕೆ ರಾಜಕಾರಣ ಕೊನೆಯಾಗಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.
ಇದನ್ನೂ ಓದಿ:ರಾಜೀನಾಮೆ ಕೊಡಲ್ಲ, ಜಗ್ಗಲ್ಲ, ಬಗ್ಗಲ್ಲ ಅನ್ನೋದೆಲ್ಲ ಬಿಡಬೇಕು: ಸಿಎಂ ವಿರುದ್ಧ ಎಚ್.ವಿಶ್ವನಾಥ್ ಕಿಡಿ
ಮುಡಾ ಹಗರಣ ಸಂಬಂಧ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಪೇಸಿಎಂ, 40% ಕಮಿಷನ್‌ ಸರ್ಕಾರ ಎಂದು ಹೇಳಿ ಬಿಜೆಪಿ ವಿರುದ್ಧ ನೂರು ಆರೋಪ ಮಾಡಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಿದೆ. ಒಂದಾದರೂ ತನಿಖೆಯನ್ನು ಸಿದ್ದರಾಮಯ್ಯ ಮಾಡಿಸಿದ್ದಿರಾ? ಯಾವ ಹಗರಣದ ಬಗ್ಗೆಯೂ ಸಣ್ಣ ತನಿಖೆ ಆಗಿಲ್ಲ. ದೊಡ್ಡ ದೊಡ್ಡವರು ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದಾರೆ. ಕಾರ್ಯಕರ್ತರನ್ನು ಮಂಗ್ಯಾ ಮಾಡಲು ಹೇಳಿಕೆಗಳ ಮೇಲಾಟ ನಡೆಸುತ್ತಾರೆಯಷ್ಟೇ ಎಂದು ವಾಗ್ದಾಳಿ ನಡೆಸಿದರು.
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಡಮ್ಮಿ ಕ್ಯಾಂಡಿಟ ಹಾಕಿದ್ದು ನಾವೇ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಅವತ್ತು ನಡೆದಿದ್ದು ಹೊಂದಾಣಿಕೆ ರಾಜಕಾರಣ. ದೊಡ್ಡ ದೊಡ್ಡವರು ಸೇರಿಕೊಂಡು ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದಾರೆ. ಈ ಪ್ರಾಸಿಕ್ಯೂಷನ್ ಮೂಲಕ ಹೊಂದಾಣಿಕೆ ರಾಜಕಾರಣ ನಿಂತು ಸ್ವಚ್ಚ ರಾಜಕಾರಣ ಮಾಡಲು ವೇದಿಕೆ ಸಿದ್ಧವಾಗಲಿ ಎಂದು ತಿಳಿಸಿದರು.
ಅಂದೇ ಸೈಟ್ ವಾಪಾಸ್ ಕೊಟ್ಟು ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂಬ ನನ್ನ ಕಾಳಜಿ ಅಂದು ಸಿಎಂಗೆ ಅರ್ಥವಾಗಲಿಲ್ಲ. ಹೀಗಾಗಿ ಗಂಡಾಂತರ ಮೈಮೇಲೆ ಎಳೆದುಕೊಂಡರು. ಈಗ ರಾಜ್ಯಪಾಲರ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ಹೇಳಿದರು.
ಹವಾಲಾ ಹಗರಣದಲ್ಲಿ ಮಾಜಿ ಪ್ರಧಾನಿ ಅಡ್ವಾಣಿ ಹೆಸರು ಬಂದ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು. ಅದೇ ರೀತಿ ಪ್ರಾಸಿಕ್ಯೂಷನ್‌ಗೆ ಆದೇಶವಾದ ಕಾರಣ ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟರು. ಕೇಜ್ರಿವಾಲ್ ಈಗ ಜೈಲಿನಿಂದಲೇ ಆಡಳಿತ ಮಾಡುತ್ತಿದ್ದಾರೆ. ಈಗ ಸಿಎಂ ಯಾವ ಹಾದಿ ಆಯ್ದು ಕೊಳ್ಳುತ್ತಾರೋ ನೋಡೋಣ ಎಂದು ಟೀಕಿಸಿದರು.
ಮೀರತ್​ : 2 ವರ್ಷದ ಮಗವಿನ ಮೇಲೆ ಅತ್ಯಾಚಾರ ಯತ್ನಿಸಿ ಚರಂಡಿಗೆ ಎಸೆದು ಕೊಂದ ಯುವಕ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + eleven =
Remember me
