ಬೆಂಗಳೂರು:ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಸಂಖ್ಯಾಬಲ 99ರಿಂದ 100ಕ್ಕೆ ಏರಿಕೆ? ಮೂರಂಕೆಗೆ ಕೈ ಕಸರತ್ತು!
“ನೀಟ್‌ನ 67 ಟಾಪರ್‌ಗಳಲ್ಲಿ 44 ಮಂದಿ ‘ಗ್ರೇಸ್‌ಮಾರ್ಕ್‌’ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ. ಗ್ರೇಸ್ ಅಂಕಗಳ ಆಧಾರದ ಮೇಲೆ ಇಷ್ಟೊಂದು ಪರೀಕ್ಷಾರ್ಥಿಗಳು ಟಾಪರ್‌ಗಳಾದಾಗ, ‘ಮಾರ್ಕಿಂಗ್ ಪ್ರಕ್ರಿಯೆ’ ಮತ್ತು ‘ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತು ಸಿಂಧುತ್ವ’ದ ಮೇಲೆ ಪ್ರಶ್ನೆ ಹುಟ್ಟುಹಾಕುವುದಿಲ್ಲವೆ? ಇನ್ನೊಂದು ಅಚ್ಚರಿಯ ವಿಷಯವೇನೆಂದರೆ 62ರಿಂದ 69ರವರೆಗಿನ ಸರಣಿ ಸಂಖ್ಯೆಗಳೊಂದಿಗೆ ನೀಟ್‌ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಒಂದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರು. ಈ ಪೈಕಿ 6 ಜನರು 720/720 ಅಂಕಗಳೊಂದಿಗೆ ನೀಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು 718 ಮತ್ತು 719 ಅಂಕಗಳನ್ನು 2 ಮಂದಿ ಪಡೆದಿದ್ದಾರೆ” ಎಂದಿದ್ದಾರೆ.
https://x.com/siddaramaiah/status/1799017350400004452
“ಮೇಲ್ನೋಟಕ್ಕೆ ಇಲ್ಲಿ ಪರೀಕ್ಷಾ ಅಕ್ರಮ ನಡೆದಿರುವುದು ಕಂಡುಬಂದರೂ ಎನ್‌ಟಿಎ ಮತ್ತು ನರೇಂದ್ರ ಮೋದಿ ಸರ್ಕಾರ ಈ ಫಲಿತಾಂಶವನ್ನು ಸಮರ್ಥಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಸೋಲಿನಿಂದಲೂ ಪಾಠ ಕಲಿತಂತೆ ಕಾಣುತ್ತಿಲ್ಲ” ಎಂದು ತಮ್ಮ ಎಕ್ಸ್​(ಈ ಹಿಂದಿನ ಟ್ವಿಟರ್​) ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಜೀವನದಲ್ಲಿ ಇದೆಲ್ಲಾ… ಕಡೆಗೂ ಛೀಮಾರಿ, ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಉಪನಾಯಕ ಹಾರ್ದಿಕ್ ಪಾಂಡ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
