ಬೆಂಗಳೂರು:ರಾಜ್ಯ ಸರ್ಕಾರದಿಂದ ಕೊಡ ಮಾಡುವ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಅರ್ಹರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಕೊನೆ ಹಂತ ತಲುಪಿದ್ದು, ಗೊಂದಲ, ಗೋಜಲು ಇಲ್ಲದೇ ಅರ್ಹತೆ, ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆ, ಲಿಂಗಬೇಧವಿಲ್ಲದ ಪಟ್ಟಿ ಬಿಡುಗಡೆಗೆ ತಯಾರಿ ನಡೆದಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ವಿವಿಧ ಆಯಾಮದ ಚರ್ಚೆಗಳು ನಡೆದವು.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯ ಸಮಿತಿಯಲ್ಲಿ ಜಾಣಗೆರೆ ವೆಂಕಟ ರಾಮಯ್ಯ, ಪಿಚ್ಚಳ್ಳಿ ಶ್ರೀನಿವಾಸ್, ಡಾ.ಸಿ.ಆರ್.ಚಂದ್ರಶೇಖರ್ ಸೇರಿ 30 ಸದಸ್ಯರಿದ್ದು, ಒಬ್ಬೊಬ್ಬರು ಒಂದು ಕ್ಷೇತ್ರವನ್ನು ಪ್ರತಿನಿಧಿಸಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಸಮಿತಿಯು ಸರ್ಕಾರಕ್ಕೆ ಸಲ್ಲಿಕೆಯಾದ ಶಿಫಾರಸುಗಳು ಹಾಗೂ ಸರ್ಕಾರದ ನೇರ ಶಿಫಾರಸಿನ ಆಯ್ಕೆಯನ್ನು ಪರಾಮರ್ಶೆ ನಡೆಸಿ 150 ಸಾಧಕರ ಪಟ್ಟಿಯನ್ನು ಅಂತಿಮಗೊಳಿಸಿ ಸಿಎಂಗೆ ಸಲ್ಲಿಸಿತು. ಒಟ್ಟಾರೆ ಪ್ರಶಸ್ತಿ ಬಯಸಿ 28,000ಕ್ಕೂ ಅಧಿಕ ಅರ್ಜಿಗಳು ಬಂದಿದ್ದವು.
ಮತ್ತೊಮ್ಮೆ ಸಮಿತಿ ಸಭೆ:ಈ ಬಾರಿ 68 ಸಾಧಕರಿಗೆ ಪ್ರಶಸ್ತಿ ನೀಡುತ್ತಿದ್ದು, ಆಯ್ಕೆ ಸಮಿತಿ 1:2 ರಂತೆ ಪಟ್ಟಿ ಸಿದ್ಧಪಡಿಸಿ ಮುಖ್ಯಮಂತ್ರಿಯವರೇ ಪಟ್ಟಿ ಅಂತಿಮ ಮಾಡಲಿ ಎಂದು ಬಯಸಿತ್ತು. ಆದರೆ, ಸಭೆಯಲ್ಲಿ ಸಿದ್ದರಾಮಯ್ಯ ಒಂದೇ ಹೆಸರನ್ನು ಅಂತಿಮಗೊಳಿಸಿ ತರಲು ಸೂಚಿಸಿದರು. ಹೀಗಾಗಿ ಸಮಿತಿ ಇನ್ನೊಮ್ಮೆ ಸಭೆ ಸೇರಿ ಅಂತಿಮ ಪಟ್ಟಿ ಸಿದ್ಧಪಡಿಸಲಿದೆ. ಇನ್ನೊಂದು ಪ್ರಮುಖ ಸಂಗತಿ ಎಂದರೆ, ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯ ಪಟ್ಟರು. ಇದಕ್ಕೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದರು. ಕಳೆದ ಬಾರಿ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ 10 ಸಂಘ-ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ ನೀಡಲಾಗಿತ್ತು.
ಸಿಎಂ ಸೂಚನೆ:ಆಯ್ಕೆ ಪಟ್ಟಿಯಲ್ಲಿ ಗೊಂದಲ ಇರಕೂಡದು. ಮಾನದಂಡದ ಪ್ರಕಾರವೇ ಆಯ್ಕೆ ನಡೆಯಬೇಕು. ಅರ್ಹರಿಗೇ ಪ್ರಶಸ್ತಿ ಲಭಿಸಬೇಕು, ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು, ಸಾಮಾಜಿಕ ನ್ಯಾಯವನ್ನು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ಆಯ್ಕೆ ಸಮಿತಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ, ಅರ್ಜಿ ಕೊಡುವವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು. ಹೀಗಾಗಿ ಈ ಬಾರಿ 68 ಪ್ರಶಸ್ತಿ ನೀಡುವ ಜತೆಗೆ 10 ಪ್ರಶಸ್ತಿಯನ್ನು ಸಂಘ ಸಂಸ್ಥೆಗಳಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ವಯೋಮಿತಿ ಸಡಿಲ ಇಲ್ಲ?: ಸಾಧನೆಗೂ ಮತ್ತು ವಯಸ್ಸಿಗೂ ಸಂಬಂಧ ಇರುವುದಿಲ್ಲ. ಹೀಗಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ವಯೋಮಿತಿ ಪರಿಗಣನೆ ಮಾಡುವುದನ್ನು ತೆಗೆದು ಹಾಕಲಾಗುವುದು ಎಂದು ಕಳೆದ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಂದಿನ ಮುಖ್ಯಮಂತ್ರಿ ಪ್ರಸ್ತಾಪಿಸಿದ್ದರು. ಕ್ರೀಡೆ ಹೊರತಾದಂತೆ ಸಣ್ಣ ವಯಸ್ಸಿನಲ್ಲಿ ಸಾಧನೆ ಮಾಡಿದ ಸಾಧಕರನ್ನು ಅವರ 60ನೇ ವಯಸ್ಸಿನವರೆಗೆ ಆಯ್ಕೆಗೆ ಪರಿಗಣಿಸಲು ಬಾರದ ನಿಯಮದ ಬಗ್ಗೆ ಕಲೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಆಕ್ಷೇಪವಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಸಿಎಂ ಭರವಸೆ ನೀಡಿದ್ದರು. ಆದರೆ ನಿಯಮಗಳಲ್ಲಿ ಯಾವುದೇ ಸಡಿಲ ಮಾಡದೇ ಅರ್ಹರ ಆಯ್ಕೆಗೆ ಸೂಚಿಸಿದೆ.
https://www.vijayavani.net/tiger-claw-case-is-it-for-show-or-is-it-really-fake
ಭಾರತದ ವರ್ಕ್​ ಕಲ್ಚರ್ ಬದಲಾಗಬೇಕು ಎಂದ ಇನ್​ಫೊಸಿಸ್​ ನಾರಾಯಣಮೂರ್ತಿ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 5 =
Remember me
