ಬೆಂಗಳೂರು:ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಿನ್ನೆ ನಡೆದ ಭೀಕರ ರೈಲು ಅಪಘಾತದಿಂದಾಗಿ ಭಾರಿ ಸಾವು-ನೋವು ಸಂಭವಿಸಿದ್ದಲ್ಲದೆ, ರೈಲು ಸಂಚಾರ ವ್ಯವಸ್ಥೆಯೇ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.
ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿರುವ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳು, ಕೋಲ್ಕತ್ತ ಮುಂತಾದ ಕಡೆಗಳಿಗೆ ತೆರಳಬೇಕಿರುವ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲೇ ದಿನ ಕಳೆಯುವಂತಾಗಿದೆ.
ಈ ಹಿನ್ನೆಲೆಯಲ್ಲಿ ರೈಲು ನಿಲ್ದಾಣದಲ್ಲಿ ರೈಲು ಓಡಾಟ ಇರದೆ ತೊಂದರೆಗೆ ಸಿಲುಕಿರುವ ಅವರೆಲ್ಲರಿಗೂ ಊಟ-ತಿಂಡಿ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರಿಗೆ ಇಂದು ಸೂಚನೆ ನೀಡಿದ್ದಾರೆ.
ಕಾಂಗ್ರೆಸಿಗರಿಂದ ಕಾನೂನು ಕಿರುಕುಳ; ಬಿಜೆಪಿ ಕಾರ್ಯಕರ್ತರಿಗಾಗಿ ಹೆಲ್ಪ್​ಲೈನ್​: ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
