ಬೆಂಗಳೂರು:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಮಾಡಿಕೊಂಡಿರುವುದರಿಂದ ಪಕ್ಷದ ಕಾರ್ಯಕರ್ತರ ಎದುರು ತಲೆ ತಗ್ಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಕ್ಟೋಬರ್​ 16ರಂದು ಸಭೆ ನಡೆಸಿ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇಬ್ರಾಹಿಂ, ಇವರು ದೆಹಲಿಗೆ ಹೋಗುವ ಮೊದಲು ರಾಜ್ಯಾಧ್ಯಕ್ಷನಾದ ನನಗೆ ಒಂದು ಮಾತು ಸಹ ಹೇಳಿಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ-ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವುದಾಗಿ ಪಕ್ಷದ ವರಿಷ್ಠರು ಘೋಷಿಸಿದ್ದಾರೆ. ಅದಕ್ಕಿಂತ ಮುಂಚೆ ಇವರು ದೆಹಲಿಗೆ ಹೋಗುವ ಮೊದಲು ರಾಜ್ಯಾಧ್ಯಕ್ಷನಾದ ನನಗೆ ಒಂದು ಮಾತನ್ನು ಹೇಳಿಲ್ಲ. ಪಕ್ಷದ ವೇದಿಕೆಯಲ್ಲೂ ಈ ಬಗ್ಗೆ ಚರ್ಚೆಯಾಗಿಲ್ಲ. ಯಾವಾಗ ಮೈತ್ರಿ ಆಯಿತು ಎಂಬ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಇದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ.
ಪಕ್ಷದ ವೇದಿಕೆಯಲ್ಲಿ ಮೈತ್ರಿ ವಿಚಾರವಾಗಿ ಚರ್ಚೆಯಾಗಿದ್ದರೆ ನಿರ್ಣಯ ಕೈಗೊಳ್ಳಬೇಕಿತ್ತು. ಅದಕ್ಕೆ ರಾಜ್ಯಾಧ್ಯಕ್ಷನಾದ ನನ್ನ ಸಹಿ ಬೇಕಿತ್ತು. ಇವರು ನೋಡಿದರೆ ಪಕ್ಷದ ಉನ್ನತ ನಾಯಕರ ಸಭೆಗೂ ಮೊದಲೇ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಬಂದಿದ್ದಾರೆ. ಜನತಾ ದಳದ ಮೂಲ ಮತಗಳು ಈ ಬಾರಿ ಕಾಂಗ್ರೆಸ್​ಗೆ ಹೋಗಿವೆ. ಅದನ್ನು ಒಪ್ಪಿಕೊಳ್ಳುವ ಸ್ಥಿತಿಯಲ್ಲಿ ಪಕ್ಷದ ನಾಯಕರು ಇಲ್ಲ. ಬಿಜೆಪಿ ನಾಯಕರ ಬಳಿ ಹೋಗಿದ್ದೇ ಜೆಡಿಎಸ್​ ನಾಯಕರು ಮಾಡಿದ ಮೊದಲ ತಪ್ಪು. ಅವರೇ ದೇವೇಗೌಡರ ಬಳಿ ಬರಬೇಕಿತ್ತು. ಜೆಡಿಎಸ್​ ಹಿಂದೂ ಅಥವಾ ಮುಸ್ಲಿಮರ ಪಕ್ಷವಲ್ಲ. ಅದು ಕನ್ನಡಿಗರ ಪಕ್ಷ ಎಂದಿದ್ದಾರೆ.
ಇದನ್ನೂ ಓದಿ:ಭಾರತದ ಗಡಿಯಲ್ಲಿ ಒಳನುಸುಳಲು ಯತ್ನ; ಇಬ್ಬರು ಭಯೋತ್ಪಾದಕರ ಹತ್ಯೆ
ನನಗೆ ತಿಳಿಸದೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿ ಬಿಜೆಪಿ ನಾಯಕರ ಜೊತೆಗೆ ಮೈತ್ರಿ ನಿರ್ಧಾರ ಮಾಡಿದ್ದು, ನನಗೆ ಬೇಸರ ಉಂಟು ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿ ಹೊರತಾಗಿ 3 ನೇ ಶಕ್ತಿ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಅಕ್ಟೋಬರ್ 16 ರಂದು ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿದ್ದೇನೆ.
ಅಕ್ಟೋಬರ್‌ 16 ರಂದು ನಾನು ಜನರ ಬಳಿ ಅಭಿಪ್ರಾಯ ಪಡೆದು ಬರ್ತೀನಿ. ಪಕ್ಷದಲ್ಲಿ ಮೊದಲಿನಿಂದಲೂ ಈ ಬಗ್ಗೆ ಚರ್ಚೆ ಆಗಿಲ್ಲ. ಅಕ್ಟೋಬರ್‌ 16 ರಂದು ಸಮಾನ ಮನಸ್ಕರು ಸಭೆ ಕರೆದಿದ್ದೇನೆ. ಕುಮಾರಸ್ವಾಮಿ ಹಾಗೂ ದೇವೇಗೌಡರ ಜೊತೆ ಚರ್ಚೆ ಮಾಡಿ ಆ ನಂತರ ನನ್ನ ಮುಂದಿನ ನಿರ್ಧಾರವನ್ನು ತಿಳಿಸುತ್ತೇನೆ.
ಈಗಾಗಲೇ ದೆಹಲಿಯಿಂದ ಕಾಂಗ್ರೆಸ್​ ನಾಯಕರು ಸಂಪರ್ಕಿಸಿದ್ದಾರೆ. ಎನ್​ಸಿಪಿಯ ಶರದ್​ ಪವಾರ್, ಆಮ್​ ಆದ್ಮಿ ಪಕ್ಷದ ಮುಖಂಡರು ನನ್ನ ಜೊತೆ ಮಾತನಾಡಿದ್ಧಾರೆ. ಅಕ್ಟೋಬರ್​ 16ರ ನಂತರ ನನ್ನ ಮುಂದಿನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
