ಬೆಂಗಳೂರು:ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸಲು ಸೂಚನೆ ನೀಡಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಈ ತೀರ್ಮಾನ ಪ್ರಕಟಿಸಿದ ಅವರು, ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಸಮರ್ಥಿಸಿದರು.ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್‌ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.
ಪ್ಯಾಕ್ಟ್ ಚೆಕ್ ಘಟಕ ರಚನೆ :ಪ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, ಖಇ ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ. ಹಾಗೂ ಸಾಮರ್ಥ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ. ಆರಂಭಿಕ ಹಂತದಲ್ಲಿ ಐ.ಟಿ ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೇ ಇರುವುದು ಸೂಕ್ತ ಎಂದು ಸಚಿವ ಪ್ರಿಯಾಂಕ ಖರ್ಗೆ ಅಭಿಪ್ರಾಯ ಪಟ್ಟರು.ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಪ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳು ಸುದ್ದಿ ಹರಡುವುದನ್ನು ನಿಯಂತ್ರಿಸಬೇಕು. ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು ಎಂದರು.ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ , ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.
*ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲವಾಗುತ್ತದೆ.ಪ್ರಿಯಾಂಕ ಖರ್ಗೆ, ಸಚಿವರು.
*ಫೇಕ್ ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೇ ರಚಿಸಿ ಸಾಮರ್ಥ್ಯ ಹೆಚ್ಚಿಸುವ ಕೆಲಸ ಆಗಬೇಕು.-ಜಿ.ಪರಮೇಶ್ವರ್, ಗೃಹ ಸಚಿವರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
