ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಅಧೀಕ್ಷಕ ಚಂದ್ರಶೇಖರನ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್​ ಸರ್ಕಾರದ ಮೊಲದ ವಿಕೆಟ್​ ಪತನವಾಗುವ ಎಲ್ಲಾ ಸೂಚನೆಗಳು ದೊರೆತಿದೆ. ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣಕ್ಕೆ ಸಂಬಂಧಿಸಿದಂತೆ ಕ್ರೀಡಾ ಹಾಗೂ ಪರಿಶಿಷ್ಟ ಕಲ್ಯಾಣ ಸಚಿವ ಬಿ.ನಾಗೇಂದ್ರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಗೇಂದ್ರಗೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿರುವುದಾಗಿ ತಿಳಿದು ಬಂದಿದೆ.
ಹಗರಣ ಸಂಬಂಧ ಗುರುವಾರ (ಮೇ 30) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿದ್ದರು. ಸಭೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಸರ್ಕಾರಕ್ಕೆ ಮುಖಭಂಗವಾಬಾರದು ಹೀಗಾಗಿ ಬಿ.ನಾಗೇಂದ್ರ ರಾಜಿನಾಮೆ ನೀಡುವುದು ಒಳಿತು. ತನಿಖೆ ಪೂರ್ಣವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತೀರ್ಮಾನ ಕೈಗೊಂಡರು. ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ, ಖುದ್ದು ತಾವೇ ಹೇಳಿಕೆ ನೀಡಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಕೋಚ್ ಅನ್ನು ಬುದ್ಧಿವಂತಿಕೆಯಿಂದ ಸೆಲೆಕ್ಟ್ ಮಾಡಿ; ಗಂಭೀರ್​ ಆಯ್ಕೆ ಖಚಿತ ಬೆನ್ನಲ್ಲೇ ಮಾರ್ಮಿಕವಾಗಿ ಟ್ವೀಟ್​ ಮಾಡಿದ ಸೌರವ್ ಗಂಗೂಲಿ
ವಿಧಾನ ಪರಿಷತ್‌ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಧಿಕಾರಿಯ ಆತ್ಮಹತ್ಯೆ ಹಾಗೂ ಸಂಭವನೀಯ ಪರಿಣಾಮಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಗೇಂದ್ರ ಅವರು ರಾಜಿನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ಈ ಹಿನ್ನೆಲೆ ಸರ್ಕಾರದ ಮೇಲೆ ಒತ್ತಡ ಸೃಷ್ಠಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ರಾಜಿನಾಮೆ ನೀಡುವಂತೆ ಸೂಚಸಿರುವುದಾಗಿ ತಿಳಿದು ಬಂದಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಚಂದ್ರಶೇಖರನ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 9 =
Remember me
