ಬೆಂಗಳೂರು:ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಇದನ್ನೂ ಓದಿ:ತುಮಕೂರು | ಠಾಣೆಗೆ ದೇವರನ್ನು ಹೊತ್ತು ತಂದು ಪೊಲೀಸರಿಂದ ವಿಶೇಷ ಪೂಜೆ!
ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಪ್ರಾರಂಭವಾಗದಿರುವ ಕಾಮಗಾರಿಗಳನ್ನು ಮರುಪರಿಶೀಲನೆಗಾಗಿ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು. ಅದರಲ್ಲಿ 9.90 ಕೋಟಿ ರೂ. ವೆಚ್ಚದ ಸಿದ್ದಗಂಗಾ ಮಠದ ವಸತಿ ನಿಲಯದ ಕಾಮಗಾರಿಯೂ ಸೇರಿತ್ತು. ಈ ಕಾಮಗಾರಿಯ ತಾಂತ್ರಿಕ ಬಿಡ್ ತೆರೆಯಲಾಗಿತ್ತು.
ಇದನ್ನೂ ಓದಿ:ದ.ಕ, ಉಡುಪಿ, ಶಿವಮೊಗ್ಗ ಜಿಲ್ಲೆಯ ಖಾಸಗಿ ಬಸ್​ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಬೇಕು: ಸುನಿಲ್ ಕುಮಾರ್ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಾಮಗಾರಿ ಟೆಂಡರ್ ಪ್ರಕ್ರಿಯೆಯನ್ನು ಮುಂದುವರೆಸುವ ಬಗ್ಗೆ ಇಲಾಖೆಯು ಸಲ್ಲಿಸಿದ ಮನವಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಂದುವರೆಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + one =
Remember me
