ಬೆಂಗಳೂರು: ಪಿಎಂ-ಕುಸುಮ್ ಕಾಂಪೋನೆಂಟ್ ಸಿ ಯೋಜನೆಯಡಿ ಫೀಡರ್ ಸೌರೀಕರಣಕ್ಕಾಗಿ ಸರ್ಕಾರಿ ಜಾಗ ಗುರುತಿಸಿ, ತ್ವರಿತವಾಗಿ ಹಸ್ತಾಂತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಯೋಜನೆಗೆ ಗುರುತಿಸಿದ ಸರ್ಕಾರಿ ಭೂಮಿಯನ್ನು ಯೋಜನೆಯ ಅನುಷ್ಠಾನಕ್ಕಾಗಿ ಕಂದಾಯ ಇಲಾಖೆಗೆ ಹಸ್ತಾಂತರಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿ ಮಾತನಾಡಿದರು.
ರಾಜ್ಯದ 400 ಉಪಕೇಂದ್ರಗಳ ಬಳಿ ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಇಂಧನ ಇಲಾಖೆಗೆ ಜಮೀನು ಹಸ್ತಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.
400 ವಿದ್ಯುತ್ ಉಪಕೇಂದ್ರಗಳ ಸಮೀಪದಲ್ಲಿ ಫೀಡರ್ ಸೌರೀಕರಣ ಅನುಷ್ಠಾನಕ್ಕಾಗಿ 3000 ಎಕರೆ ಭೂಮಿ ಅಗತ್ಯವಿದೆ. ಜಿಲ್ಲಾಧಿಕಾರಿಗಳಿಗೆ ಭೂಮಿ ಹಂಚಿಕೆ ಮಾಡಲು ಅಧಿಕಾರ ಪ್ರತ್ಯಾಯೋಜನೆ ಮಾಡಿದರೆ ತ್ವರಿತವಾಗಿ ಯೋಜನೆ ಅನುಷ್ಠಾನ ಮಾಡಲು ಸಾಧ್ಯವಿದೆ. ಇದರಿಂದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲೇ ವಿದ್ಯುತ್ ಪೂರೈಕೆ ಮಾಡಲು ಸಹ ಸಾಧ್ಯವಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಇಂಧನ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಸ್ಥಳೀಯ ತಹಸೀಲ್ದಾರರೊಂದಿಗೆ ಜಮೀನು ಗುರುತಿಸಿ, ಸೂಕ್ತ ಪ್ರಸ್ತಾವನೆ ಕೂಡಲೇ ಕಳುಹಿಸಿ, ಹಸ್ತಾಂರಕಕ್ಕೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು.
ಕಂದಾಯ ಇಲಾಖೆಯು ಇಂಧನ ಇಲಾಖೆಗೆ ಭೂಮಿಯನ್ನು ಲೀಸ್ ಆಧಾರದಲ್ಲಿ ಹಸ್ತಾಂತರಿಸಬೇಕು. ಆದರೆ ಈ ಆಸ್ತಿಯನ್ನು ಇಂಧನ ಇಲಾಖೆ ಖಾಸಗಿಯವರಿಗೆ ಹಸ್ತಾಂತರಿಸುವಂತಿಲ್ಲ ಎಂಬ ಷರತ್ತು ಹಾಕುವಂತೆ ಸೂಚಿಸಿದರು.
ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಖುದ್ದು ಸೂಚನೆ ನೀಡುವುದಾಗಿ ಹಾಗೂ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಕುರಿತು ಆದ್ಯತೆ ನೀಡಲು ಸೂಚಿಸುವುದಾಗಿ ತಿಳಿಸಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 19 =
Remember me
