ಬೆಂಗಳೂರು:ಮಹರ್ಷಿವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದಿಸಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚಿಸಿದರು.
ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ಅನುದಾನದಲ್ಲಿ 50 ಕೋಟಿಯನ್ನು ಎಸ್ ಐ ಟಿ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲೇ ಫ್ರೀಜ್ ಮಾಡಿಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿರುವ ಸುಮಾರು 30 ಕೋಟಿಯಷ್ಟು ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಪ್ರಯತ್ನ ಮುಂದುವರೆದಿದೆ. ಸದ್ಯದಲ್ಲೇ ಪೂರ್ತಿ ಹಣವನ್ನು ವಾಪಸ್ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.
ಅಲ್ಲಿಯವರೆಗೂ ವಾಲ್ಮೀಕಿ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಮ್ಮತಿಸಿದ ಸಿಎಂ, ಅಭಿವೃದ್ಧಿ ಕಾರ್ಯಗಳು, ಕಾರ್ಯಕ್ರಮಗಳು ನಿಲ್ಲದಂತೆ ಕ್ರಮವಹಿಸುವ ಭರವಸೆ ನೀಡಿದರು.
ಪ್ರಕರಣ ಪೂರ್ತಿ ಇತ್ಯರ್ಥ ಆಗುವವರೆಗೂ ನಿಗಮದ ಮತ್ತು ಸಮುದಾಯದ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವುದು ನಮ್ಮ ಆಧ್ಯತೆಯಾಗಿದೆ. ಹೀಗಾಗಿ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ನಿಯೋಗಕ್ಕೆ ಸ್ಪಷ್ಟಪಡಿಸಿದರು.
ಶಾಸಕರಾದ ಕಂಪ್ಲಿ ಗಣೇಶ್, ರಘುಮೂರ್ತಿ, ಕೋನರೆಡ್ಡಿ, ಸಮುದಾಯದ ಮುಖಂಡರಾದ ನಿವೃತ್ತ ಕೆಎಎಸ್ ಅಧಿಕಾರಿ ಮೃತ್ಯುಂಜಯಪ್ಪ ಸೇರಿ ಸಮಾಜದ ಹಲವು ಹಿರಿಯರು ಉಪಸ್ಥಿತರಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − three =
Remember me
