ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಸಿದ ಹಿಂದುಳಿದ ವರ್ಗಗಳ ಆಯೋಗದ ಹಿಂದಿ‌ನ ಅಧ್ಯಕ್ಷ ಎಚ್.ಕಾಂತರಾಜು ವರದಿಯನ್ನು ಸ್ವೀಕರಿಸಲು ಸರ್ಕಾರ ಸಿದ್ಧವಿದೆ.ಕಾಂತರಾಜು ರಿಪೋರ್ಟ್ ಸ್ವೀಕಾರ ಮಾಡಲು ಸರ್ಕಾರ ಸಿದ್ಧವಿದೆ.‌ ಆಯೋಗದ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರ ಅವಧಿ ಜನವರಿ 31ವರೆಗಿದೆ. ಅಷ್ಟರೊಳಗೆ ವರದಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಆಯೋಗ ವರದಿ ಕೊಟ್ಟರೆ ನಾವು ತೆಗೆದುಕೊಳ್ಳುತ್ತೇವೆ .ವರದಿ ನೋಡೋಣ, ಓದೋಣ ಬಳಿಕ ಆ ಬಗ್ಗೆ ಚರ್ಚೆ ಮಾಡೋಣ.ಇದು ಜಾತಿಗಣತಿ ಅಲ್ಲ. ಇದು ಹಿಂದುಳಿದ ವರ್ಗಗಳ ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಯ ವರದಿ. ಇದು ಯಾರ ವಿರುದ್ಧ ಇರುವ ವರದಿಯಲ್ಲ. ಯಾರ ವಿರೋಧವೂ ಇಲ್ಲ ಎಂದರು.
ಕಾಂತರಾಜು ರಿಪೋರ್ಟ್ ಸ್ವೀಕಾರ ಮಾಡುವುದರಲ್ಲಿ ತಪ್ಪಿಲ್ಲ. ಸ್ವೀಕಾರ ಮಾಡುವಂತೆ ಒತ್ತಾಯ ಮಾಡುವುದು ಸಹ ತಪ್ಪಲ್ಲ. ಕಾಂತರಾಜು ರಿಪೋರ್ಟ್ ಹೆಗ್ಡೆಯವರು ಕೊಟ್ಟಾಗ ತೆಗೆದುಕೊಳ್ಳುತ್ತೇವೆ. ಮತ್ತೆ ಅವಧಿ ವಿಸ್ತಾರಣೆ ಯೋಚನೆ ಸರ್ಕಾರದ ಮುಂದೆ ಇಲ್ಲ ಎಂದು ತಂಗಡಗಿ ಸ್ಪಷ್ಟಪಡಿಸಿದರು.
ಸಂಸದ ಅನಂತ್ ಕುಮಾರ್ ಹೆಗಡೆ ಓರ್ವ ಹುಚ್ಚ. ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಚಿಕಿತ್ಸೆ ಕೊಡಿಸಲಿ, ಇಲ್ಲಾಂದ್ರೆ ನಾವು ಕೊಡಿಸುತ್ತೇವೆ ಎಂದು ವ್ಯಂಗ್ಯವಾಡಿದರು.
ಅನಂತ್ ಕುಮಾರ್ ಹೆಗಡೆ ಹುಚ್ಚ ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ ಎಂದು ಇವಾಗ ಸಾಬೀತಾಯಿತು. ಬಿಜೆಪಿ ರಾಜ್ಯಾಧ್ಯಕ್ಷರೇ ಅವರ ಮಾತಿಗೆ ನಾವು ಬೆಲೆ ಕೊಡಲ್ಲ ಎಂದು ಹೇಳಿದ್ದಾರೆ. ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ. ಆತ ಬಿಜೆಪಿಯೊಳಗಿರುವ ಹುಚ್ಚ, ಆತನನ್ನು ಹುಚ್ಚಾಸ್ಪತ್ರೆಗೆ ಸೇರಿಸುವ ಕೆಲಸ ಮಾಡಿ ಎಂದು ಕಿಡಿಕಾರಿದರು.
ಅನಂತ್ ಕುಮಾರ್ ‌ಹೆಗಡೆ ವಿರುದ್ಧದ ಕ್ರಮದ ಬಗ್ಗೆ ಸಿಎಂ, ಗೃಹ ಸಚಿವರು ನಿರ್ಧಾರ ಮಾಡುತ್ತಾರೆ. ಅದಕ್ಕೂ ಮುನ್ನವೇ ಬಿಜೆಪಿ ರಾಜ್ಯಾಧ್ಯಕ್ಷರು ಅವರಿಗೆ ಚಿಕಿತ್ಸೆ ಕೊಡಿಸಲಿ, ಇಲ್ಲವಾದರೆ ನಾವು ಕೊಡಿಸುತ್ತೇವೆ ಎಂದು ಶಿವರಾಜ್ ತಂಗಡಗಿ ಪುನರುಚ್ಚರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
