ಬೆಂಗಳೂರು:ಇತ್ತೀಚೆಗಷ್ಟೇ ರಾಜ್ಯದಲ್ಲಿ ತೈಲ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್ 3 ರೂ. ಮತ್ತು ಡಿಸೇಲ್ ದರದಲ್ಲಿ 3.50 ರೂ. ಹೆಚ್ಚಳವಾಗಿದೆ. ರಾಜ್ಯದಲ್ಲಿ ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ಜನಸಾಮಾನ್ಯರು ಆಡಳಿತರೂಢ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಇದನ್ನು ಶೀಘ್ರವೇ ಕಡಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಕ್ರಿಕೆಟ್​ ಇತಿಹಾಸದಲ್ಲೇ ಇದುವರೆಗೂ ಯಾರೂ ಮಾಡಿರದ ವಿಶ್ವದಾಖಲೆ ಬರೆದ ಆರ್​ಸಿಬಿ ಸ್ಟಾರ್​ ಆಟಗಾರ!
ಇದರ ಬೆನ್ನಲ್ಲೇ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ, “ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಜಿಎಸ್​ಟಿ ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್‌, ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತುಪಡಿಸಿ ಇತರೆ ಯಾವುದೇ ಆದಾಯ ಮೂಲಗಳು ಉಳಿದಿಲ್ಲ” ಎಂದರು.
“ಈ ಹಿನ್ನೆಲೆಯಲ್ಲಿ ಜನರಿಗೆ ಹೊರೆಯಾಗದಂತೆ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದ್ದು, ಈ ಬದಲಾವಣೆಯ ನಂತರವೂ ದಕ್ಷಿಣ ಭಾರತದ ಇತರೆ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದಲ್ಲಿರುವ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ತೈಲ ಬೆಲೆ ಕಡಿಮೆಯಿದೆ” ಎಂದು ಹೇಳಿದ್ದಾರೆ.
ಅಂದು ಅಪ್ಪು ಮತ್ತು ಸುದೀಪ್​ ಸರ್​​ ಹಲ್ಲುಕಚ್ಚಿಕೊಂಡು ಸುಮ್ಮನಿದ್ರು: ನಿರ್ಮಾಪಕ ಉಮಾಪತಿ ಸ್ಪೋಟಕ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + five =
Remember me
