ಬೆಂಗಳೂರು:ಕರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಇನ್ನು ಮುಂದೆ ತಮ್ಮ ಕಚೇರಿಗೆ ಕಡತಗಳನ್ನು ಮತ್ತು ಪತ್ರಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ ಈಗಾಗಲೇ ಅಸ್ತಿತ್ವದಲ್ಲಿರುವ ಇ- ಆಫೀಸ್ ಮೂಲಕವೇ ಸಲ್ಲಿಸಬೇಕೆಂದು ಸಿಎಂ ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಚಿವಾಲಯದ ಎಲ್ಲ ಕಚೇರಿಗಳಲ್ಲಿ 2019ರ ಮೇ 1 ರಿಂದ ಜಾರಿಗೆ ಬರುವಂತೆ ಇ -ಆಫೀಸ್​​​ ತಂತ್ರಾಶವನ್ನು ಅನುಷ್ಠಾನಗೊಳಿಸಲಾಗಿದ್ದು, ಈ ತಂತ್ರಾಂಶವನ್ನು ಬಳಸಿ 2019ರ ನವೆಂಬರ್ 1 ರಿಂದಲೇ ಜಾರಿಗೆ ಬರುವಂತೆ ನಮ್ಮ ಕಚೇರಿಯಿಂದ ಸಚಿವಾಲಯದ ಎಲ್ಲ ಇಲಾಖೆಗಳು/ ಅಧೀನ ಸಂಸ್ಥೆಗಳಿಗೆ ಇ-ಆಫೀಸ್ ಮೂಲಕವೇ ವ್ಯವಹರಿಸಲಾಗುತ್ತಿದೆ.
ಇದನ್ನೂ ಓದಿ:ಪಿಯು ಮಟ್ಟದಿಂದಲೇ ಆನ್​ಲೈನ್​ ತರಗತಿ ಆರಂಭಿಸಿ; ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ
ರಾಜ್ಯ ಮಟ್ಟದ ಎಲ್ಲ ಇಲಾಖೆಗಳ ಮುಖ್ಯಸ್ಥರ ಕಚೇರಿ, ಪ್ರಾದೇಶಿಕ ಆಯುಕ್ತರ ಕಚೇರಿ, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿ, ಪೊಲೀಸ್ ವರಿಷ್ಠಾಧಿಕಾರಿಗಳ, ಉಪ ಅರಣ್ಯ ಸಂರಕ್ಷಣಾಧಿಕಾರಿ (ಪ್ರಾದೇಶಿಕ) ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ (ಸಾಮಾಜಿಕ)ಗಳ ಕಚೇರಿಯಲ್ಲಿ 2020ರ ಜನವರಿ 1 ರಿಂದ ಜಾರಿಗೆ ಬರುವಂತೆ ಇ- ಆಫೀಸ್ ಅನ್ನು ಜಾರಿಗೊಳಿಸಲಾಗಿದೆ.ಕರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಇನ್ನು ಮುಂದೆ ಕಡತಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ ನಮ್ಮ ಕಚೇರಿಗೆ ಇ- ಆಫೀಸ್ ಮೂಲಕವೇ ಸಲ್ಲಿಸಬೇಕು ಹಾಗೂ ಎಲ್ಲ ಸಚಿವರು ತಮ್ಮ ಕಚೇರಿಗಳಲ್ಲಿ ಇ- ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ನಿರ್ವಹಿಸಬೇಕೆಂದು ಅವರು ತಿಳಿಸಿದ್ದಾರೆ.
ಚೆನ್ನೈನಲ್ಲಿನ್ನು ಕ್ಷೌರ ಮಾಡಿಸಲು ಆಧಾರ್ ಕಡ್ಡಾಯ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
