
ಬೆಂಗಳೂರು:ಸರ್ಕಾರ ದಿವಾಳಿಯಾಗಿಲ್ಲ, ಆರ್ಥಿಕವಾಗಿ ಸುಸ್ಥಿತಿಯಲ್ಲಿದೆ. ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಅಭಿವೃದ್ಧಿಗೂ ಬಜೆಟ್‌ನಲ್ಲಿ ಹೆಚ್ಚಿನ ಹಣವನ್ನು ಒದಗಿಸಲಾಗಿದೆ. ಸರ್ಕಾರದ ಒಂದು ವರ್ಷದ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರಕ್ಕೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರೆಸ್ ಕ್ಲಬ್ ಆ್ ಬೆಂಗಳೂರು ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, ವಿಪಕ್ಷಗಳು ಎಷ್ಟೆ ಅಪಪ್ರಚಾರ ಮಾಡಿದರೂ ಗ್ಯಾರಂಟಿ ಯೋಜನೆಗೆ ಬಾಧಕವಿಲ್ಲ ಎಂದು ಅಭಯ ನೀಡಿದರು.ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಅದಕ್ಕಾಗಿಯೇ ಬಜೆಟ್‌ನಲ್ಲಿ 52009 ಕೋಟಿ ರೂ ಹಣ ಮೀಸಲಿಟ್ಟಿರುವುದಾಗಿ ತಿಳಿಸಿದರು.ಖಜಾನೆ ಖಾಲಿ ಆಗಿದೆ ಎಂದು ಸುಳ್ಳು ಹೇಳುವ ಮೂಲಕ ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ.ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 ಕೋಟಿ ಖರ್ಚು ಮಾಡುವುದಾಗಿ ಹೇಳಿದ್ದರೂ, 56274 ಕೋಟಿ ಖರ್ಚು ಮಾಡಲಾಗಿದೆ. ನೀರಾವರಿಗೆ 16360 ಕೋಟಿ ಮೀಸಲಿರಿಸಲಾಗಿತ್ತು. ಆದರೆ 18198 ಕೋಟಿ ಖರ್ಚು ಮಾಡಲಾಗಿದೆ. ಲೋಕೋಪಯೋಗಿ ಇಲಾಖೆಗೂ 9661 ಕೋಟಿ ಖರ್ಚು ಮಾಡಲಾಗಿದೆ. ಬೊಮ್ಮಾಯಿ ಬಜೆಟ್ ಗಾತ್ರಕ್ಕಿಂತ ಈ ಸರ್ಕಾರದ ಬಜೆಟ್ ಗಾತ್ರ ಹೆಚ್ಚಾಗಿದೆ ಎಂದು ಅಂಕಿ ಅಂಶಗಳ ಸಹಿತ ವಿವರಣೆ ನೀಡಿದರು.ಅಧಿಕಾರ ವಹಿಸಿಕೊಂಡ ದಿನದಿಂದಲೇ ಗ್ಯಾರಂಟಿಗಳ ಜಾರಿಗೆ ಕ್ರಮ ತೆಗೆದುಕೊಂಡು ಐದನ್ನೂ ಐದೂ ಜಾರಿ ಮಾಡಿದ್ದೇವೆ. ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದೆ ಕೇಂದ್ರ ಸರ್ಕಾರ ಅಸಹಾಕಾರ ತೋರಿದರೂ, ನಾವು ಯೋಜನೆ ಜಾರಿಗೆ ಕೊಟ್ಟಿದ್ದೇವೆ. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಗೆ 2 ಸಾವಿರ ರೂ, ಶಕ್ತಿ ಯೋಜನೆಯಲ್ಲಿ ಉಚಿತ ಬಸ್ ಪ್ರಯಾಣ, ಗೃಹ ಜ್ಯೋತಿ ಯೋಜನೆಯಲ್ಲಿ ಉಚಿತ ವಿದ್ಯುತ್ ಕಲ್ಪಿಸುವ ಮೂಲಕ ಜನ ಸಾಮಾನ್ಯರ ಆರ್ಥಿಕ ಸ್ಥಿತಿ ಉತ್ತಮಗೊಳ್ಳುವಂತೆ ಮಾಡಲಾಗಿದೆ ಎಂದರು.ದೇವಸ್ಥಾನಗಳ ಹಣ ಕಿತ್ತುಕೊಳ್ಳುತ್ತಿದ್ದಾರೆ ಎನ್ನುವುದು ಸುಳ್ಳು. ಆದಾಯ ಕಡಿಮೆ ಇರುವ ದೇವಸ್ಥಾನಗಳ ಅಭಿವೃದ್ಧಿಗೆ ನಾವು ಮುಂದಾಗಿದ್ದೇವೆ ಎಂದರು.ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ,ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. ಖಇಖ/ಖ ಕಾಯ್ದೆ ಮಾಡಲಾಗಿದೆ ಎಂದರು.
ಮೋದಿ ಸುಳ್ಳು ಆರೋಪಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲೀಮರಿಗೆ ಕೊಡ್ತಾರೆ ಎಂದು ಮತ್ತೊಂದು ಮೋದಿ ಸುಳ್ಳು ಹೇಳುತ್ತಿದ್ದಾರೆ. ಇದು ಅಪ್ಪಟ ಸುಳ್ಳು. ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ 30 ವರ್ಷದಿಂದ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಜಾರಿಯಲ್ಲಿದೆ. ಬೊಮ್ಮಾಯಿ ಸರ್ಕಾರ ಕೂಡ ಸುಪ್ರೀಂಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿ ಮುಸ್ಲೀಮರ ಮೀಸಲಾತಿ ರದ್ದು ಮಾಡುವುದಿಲ್ಲ ಎಂದು ಒಪ್ಪಿಕೊಂಡಿದೆ ಎಂದರು. ಆದರೂ ಮೋದಿ ಭಾಷಣಗಳಲ್ಲಿ ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಹೀಗಾಗಿ ಮೋದಿ ಹೇಳುತ್ತಿರುವುದು ಅಪ್ಪಟ ಸುಳ್ಳು.ಚುನಾವಣೆಗಾಗಿ ಜನರನ್ನು ರೊಚ್ಚಿಗೆಬ್ಬಿಸಿ, ದಿಕ್ಕು ತಪ್ಪಿಸುವುದನ್ನು ಬಿಜೆಪಿ ಮತ್ತು ಮೋದಿ ನಿಲ್ಲಿಸಬೇಕು. ಜನ ಬಿಜೆಪಿಯ ಸುಳ್ಳಿಗಳ ಬಗ್ಗೆ ಎಚ್ಚೆತ್ತುಕೊಂಡಿದ್ದಾರೆ ಎಂದರು.ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರ ಮಟ್ಟದಲ್ಲಿ ಜಾತಿ ಗಣತಿ ಮಾಡುತ್ತೇವೆ ಎಂದು ಘೋಷಿಸಿದ್ದು ಇದೇ ಕಾರಣಕ್ಕೆ. ಇದರಲ್ಲಿ ಏನು ತಪ್ಪಿದೆ ಎಂದು ಸಿಎಂ ಪ್ರಶ್ನಿಸಿದರು
ಭ್ರಷ್ಟಾಚಾರ ತನಿಖೆಹಿಂದಿನ ಸರ್ಕಾರದ ಶೇ.40 ಕಮಿಷನ್ ಬಗ್ಗೆ ತನಿಖೆಗೆ ಶುರು ಮಾಡಿಸಿದ್ದೇವೆ. ಕೋವಿಡ್ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈ ಸರ್ಕಾರದಲ್ಲಿಭ್ರಷ್ಟಾಚಾರ ಸಂಪೂರ್ಣವಾಗಿ ನಿಂತಿದೆ ಎಂದು ಹೇಳೋದಿಲ್ಲ. ಆದರೆ ಪ್ರಮಾಣ ಕಡಿಮೆ ಮಾಡಲು ನಿಷ್ಠುರವಾಗಿ ಕ್ರಮ ತೆಗೆದುಕೊಂಡಿದ್ದೇವೆ ಎಂದರು.
ಸಂಪುಟದ ಮುಂದೆ ವರದಿಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರನ್ನು ಪತ್ತೆ ಹಚ್ಚಲು ಜಾತಿ ಗಣತಿ,ಸಾಮಾಜಿಕ ಆರ್ಥಿಕ ಸಮೀಕ್ಷೆ ಅತ್ಯಗತ್ಯ. ಹೀಗಾಗಿಯೇ ನಾವು ಜಾತಿಗಣತಿ ಮಾಡಿಸಿ ವರದಿ ಸ್ವೀಕರಿಸಿದೆವು. ಈ ವರದಿ ಯಾವುದೇ ಸಮುದಾಯಕ್ಕೂ ತೊಂದರೆ ಮಾಡುವುದಿಲ್ಲ. ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಮೌಲ್ಯ ಕಾಪಾಡಲು ವರದಿ ಸ್ವೀಕರಿಸಿದ್ದು, ಸಂಪುಟದ ಮುಂದೆ ಇಡಲಾಗುವುದು ಎಂದರು.
ಕೇಂದ್ರದಿಂದ ದ್ರೋಹಭೀಕರ ಬರಕ್ಕೆ ತುತ್ತಾದಾಗಲೂ ರಾಜ್ಯದ ಪಾಲಿನ ಬರ ಪರಿಹಾರವನ್ನು ಕೇಂದ್ರ ಕೊಡಲಿಲ್ಲ. ನಾವು ನಮ್ಮ ಪಾಲು ಕೇಳಲು ಪದೇ ಪದೇ ಕೇಂದ್ರಕ್ಕೆ ಹೋಗಿ ಮನವಿ ಮಾಡಿದರೂ ಕೊಡಲಿಲ್ಲ. ನಾನೇ ಪ್ರಧಾನಿ ಮತ್ತು ಅಮಿತ್ ಶಾ ಅವರಿಗೆ ಮನವಿ ಕೊಟ್ಟೆ. ಆದರೂ ಪ್ರಯೋಜನ ಆಗಲಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಯಿತು. ಆಮೇಲೆ ಅಮಿತ್ ಶಾ, ಮೋದಿ, ನಿರ್ಮಲಾ ಸೀತಾರಾಮನ್ ಪದೇ ಪದೇ ರಾಜ್ಯಕ್ಕೆ ಬಂದು ಜನರಿಗೆ ಸುಳ್ಳು ಹೇಳಿದರು. ಆದರೆ, ಸುಪ್ರೀಂಕೋರ್ಟ್ ಚಾಟಿ ಬೀಸಿದ ಮೇಲೆ ನಾವು ಕೇಳಿದ್ದರಲ್ಲಿ ಶೇ.19 ಪರಿಹಾರ ಕೊಟ್ಟಿದ್ದಾರೆ. ನಾವು ಬಾಕಿ ಪರಿಹಾರಕ್ಕಾಗಿ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 17 =
Remember me
