ಬೆಂಗಳೂರು:ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆರೋಗ್ಯ ಸಂಬಂಧ ಎಂ.ಎಸ್​. ರಾಮ್ಯಯ್ಯ ಆಸ್ಪತ್ರೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.
ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಎಸ್.ರಾಮಯ್ಯ ಮೆಮೋರಿಯಲ್ ಆಸ್ಪತ್ರೆ ಅಧ್ಯಕ್ಷ ಡಾ. ನರೇಶ್ ಶೆಟ್ಟಿ, ಶನಿವಾರ ಸಂಜೆ ಸುಮಾರು 7 ಗಂಟೆಗೆ ನಿದ್ರೆ ಮಾತ್ರೆ ಸೇವಿಸಿದ್ದ ಸಂತೋಷ್​ ಅವರನ್ನು ರಾತ್ರಿ 8.30ಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 10 ಗಂಟೆಗೆ ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿದೆ. ಬೆಳಗ್ಗೆ ತಿಂಡಿ ಸೇವಿಸಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ನಿದ್ದೆ ಮಾತ್ರೆ ಸೇವಿಸಿದ್ದ ಸಂತೋಷ್​ ಚಿಕಿತ್ಸೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ. ಇಂದು (ಶನಿವಾರ) ಮಧ್ಯಾಹ್ನ ಜನರಲ್ ವಾರ್ಡ್​ಗೆ ಶಿಫ್ಟ್ ಮಾಡ್ತೀವಿ. ಇನ್ನೊಂದು ಅಥವಾ ಎರಡು ದಿನದಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತೆ. ಅದು ಅವರ ಆರೋಗ್ಯ ಸ್ಥಿತಿ ನೋಡಿಕೊಂಡು ಎಂದು ಡಾ. ನರೇಶ್ ಶೆಟ್ಟಿ ವಿವರಿಸಿದರು.
ನಿದ್ರೆ ಮಂಪರಿನಲ್ಲೇ ಇರುವ ಸಂತೋಷ್​ಗೆ ಹೆಚ್ಚು ಮಾತನಾಡಲು ಸಾಧ್ಯವಾಗುತ್ತಿಲ್ಲ. ನಿನ್ನೆ ರಾತ್ರಿಗಿಂತ ಇಂದು ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಎಷ್ಟು ನಿದ್ದೆ ಮಾತ್ರೆಗಳನ್ನು ತೆಗೆದುಕೊಂಡಿದ್ದರು ಅಂತ ಹೇಳೋಕೆ ಆಗಲ್ಲ ಎಂದರು.
ಸಂತೋಷ್​ ಆತ್ಮಹತ್ಯೆ ಯತ್ನ ಕುರಿತ ಊಹಾಪೋಹಕ್ಕೆ ಸ್ಪಷನೆ ಕೊಟ್ಟ ಸಿಎಂ ಪುತ್ರ

ಉಮಾಶ್ರೀ ಕಾರು ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು! ತೀವ್ರ ಸಂಕಟಕ್ಕೆ ಸಿಲುಕಿದ ನಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
